'ಡಿಜಿಟಲ್ ಟಿಕೆಟ್ ವ್ಯವಸ್ಥೆ' ಜಾರಿಗೆ ಬಿಎಂಟಿಸಿ ಮುಂದು!
ಡಿಸೆಂಬರ್ 23 ರಿಂದ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯುಪಿಐ ಆಧಾರಿತ ಟಿಕೆಟ್ ವ್ಯವಸ್ಥೆಯನ್ನು ಹೊರತರಲು ಸಿದ್ಧತೆ ನಡೆಸಿದೆ.

ಬೆಂಗಳೂರು: ಡಿಸೆಂಬರ್ 23 ರಿಂದ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಯುಪಿಐ ಆಧಾರಿತ ಟಿಕೆಟ್ ವ್ಯವಸ್ಥೆಯನ್ನು ಹೊರತರಲು ಸಿದ್ಧತೆ ನಡೆಸಿದೆ.
ಟಿಕೆಟ್‌ಗಳನ್ನು ಖರೀದಿಸಲು ಪ್ರಯಾಣಿಕರು ತಮ್ಮ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ಸಹ ಬಳಸಬಹುದು. ತಾಂತ್ರಿಕ ದೋಷ ಅಥವಾ ವಹಿವಾಟು ವಿಫಲವಾದಲ್ಲಿ, ನಗದು ಪಾವತಿಸಿ ಭೌತಿಕ ಟಿಕೆಟ್ ಖರೀದಿಸಬೇಕು ಎಂದು ಸಾರಿಗೆ ನಿಗಮ ತಿಳಿಸಿದೆ.
ಬಿಎಂಟಿಸಿ ನಿರ್ದೇಶಕ (ಐಟಿ) ಸೂರ್ಯ ಸೇನ್ ಅವರು ಮಾತನಾಡಿ, “ಯುಪಿಐ ಆಧಾರಿತ ಟಿಕೆಟ್ ವ್ಯವಸ್ಥೆಯನ್ನು ಜಾರಿಗೆ ತರಲು ನಾವು ಎಲೆಕ್ಟ್ರಾನಿಕ್ ಟಿಕೆಟಿಂಗ್ ಯಂತ್ರಗಳನ್ನು (ಇಟಿಎಂ) ಸಂಗ್ರಹಿಸಿದ್ದೇವೆ. ಎಲ್ಲವೂ ಯೋಜಿಸಿದಂತೆ ನಡೆದರೆ, ಪ್ರಯಾಣಿಕರು ಡಿಸೆಂಬರ್ 23 ರಿಂದ ಈ ಸೇವೆಯನ್ನು ಪಡೆಯಬಹುದು ಎಂದು ಹೇಳಿದ್ದಾರೆ.
ಪ್ರಯಾಣಿಕರು ತಲುಪಬೇಕಿರುವ ಸ್ಥಳಕ್ಕೆ ತಗುಲುವ ಟಿಕೆಟ್ ವೆಚ್ಚವನ್ನು ನಿರ್ವಾಹಕರು ತಿಳಿಸಲಿದ್ದು, ಪ್ರಯಾಣಿಕರು ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಕ್ಯೂಆರ್ ಕೋಟ್ ಸ್ಕ್ಯಾನ್ ಮಾಡಿ ಮೊತ್ತವನ್ನು ಪಾವತಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಬಿಎಂಟಿಸಿ ಬಸ್‌ಗಳಲ್ಲಿ ನಿಯಮಿತವಾಗಿ ಪ್ರಯಾಣಿಸುವ ಪ್ಲಂಬರ್ ಪುರುಷೋತ್ತಮನ್ ಅವರು ಮಾತನಾಡಿ, "ನಾವು ಡಿಜಿಟಲ್ ವಹಿವಾಟಿಗೆ ಒಗ್ಗಿಕೊಂಡಿರುವುದರಿಂದ ಬಿಎಂಟಿಸಿಯ ಇಂತಹ ನಿರ್ಧಾರ ಸ್ವಾಗತಾರ್ಹ ಕ್ರಮವಾಗಿದೆ. ಇನ್ನು ಮುಂದೆ ನಾವು ಹಣ ಡ್ರಾ ಮಾಡಲು ಎಟಿಎಂಗಳಿಗೆ ಓಡಾಡಬೇಕಾಗಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


