ಬಸ್‌ನಲ್ಲಿನ ದೋಷದಿಂದ ಪ್ರಯಾಣಿಕರು ಗಾಯಗೊಂಡರೆ ಪರಿಹಾರ ನೀಡಿ: ಕೆಎಸ್‌ಆರ್‌ಟಿಸಿಗೆ ಹೈಕೋರ್ಟ್
ಬಸ್ ನಲ್ಲಿನ ದೋಷದಿಂದ ಪ್ರಯಾಣಿಕರು ಗಾಯಗೊಂಡರೆ ಪರಿಹಾರ ನೀಡುವಂತೆ ಕೆಎಸ್‌ಆರ್‌ಟಿಸಿಗೆ ಹೈಕೋರ್ಟ್ ಶನಿವಾರ ಸೂಚನೆ ನೀಡಿದೆ.

ಬೆಂಗಳೂರು: ಬಸ್ ನಲ್ಲಿನ ದೋಷದಿಂದ ಪ್ರಯಾಣಿಕರು ಗಾಯಗೊಂಡರೆ ಪರಿಹಾರ ನೀಡುವಂತೆ ಕೆಎಸ್‌ಆರ್‌ಟಿಸಿಗೆ ಹೈಕೋರ್ಟ್ ಶನಿವಾರ ಸೂಚನೆ ನೀಡಿದೆ.
ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕುಂತನಹಳ್ಳಿ ಗ್ರಾಮದ ಪಿ ಚಂದ್ರಪ್ರಭಾ ಅವರು ಮೋಟಾರು ವಾಹನ ಅಪಘಾತ ನ್ಯಾಯಾಧಿಕರಣದ ಅರ್ಜಿಯನ್ನು ವಜಾಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಹಂಚಾಟೆ ಸಂಜೀವಕುಮಾರ್ ಅವರು ಪುರಸ್ಕರಿಸಿದ್ದಾರೆ.
ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ಅತಿವೇಗದ ಚಾಲನೆಯಿಂದಾಗಿ ಸರ್ಕಾರಿ ಪ್ರಾಥಮಿಕ ಶಾಲೆಯ 30 ವರ್ಷದ ಶಿಕ್ಷಕಿ ಚಂದ್ರಪ್ರಭಾ ಅವರು ತಮ್ಮ ಬಲಗಾಲಿನ ಮೂಳೆ ಮುರಿತಕ್ಕೆ ಒಳಗಾಗಿ 12 ದಿನಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದರು.
ಪ್ರಕರಣ ಸಂಬಂಧ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಲ್ಲಿ ಚಾಲಕ ತಪ್ಪಿತಸ್ಥರಲ್ಲ ಎಂದು ಪೊಲೀಸರು ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿದ ಚಂದ್ರಪ್ರಭಾ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಚಂದ್ರಪ್ರಭಾ ಅವರ ಅರ್ಜಿಯನ್ನು ನ್ಯಾಯಾಧಿಕರಣ ವಜಾಗೊಳಿಸಿತ್ತು, ನಂತರ ಚಂದ್ರಪ್ರಭಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಯನ್ನು ನ್ಯಾಯಮೂರ್ತಿ ಹಂಚಾಟೆ ಸಂಜೀವಕುಮಾರ್ ಅವರು ಪುರಸ್ಕರಿಸಿದ್ದು, ಅರ್ಜಿದಾರರು ಇಲ್ಲಿಯವರಗೆ ವಾರ್ಷಿಕ ಶೇ.6 ಬಡ್ಡಿಯೊಂದಿಗೆ ರೂ.1.30,000 ಪರಿಹಾರ ಪಡೆದುಕೊಳ್ಳುಲು ಅರ್ಹರಾಗಿದ್ದಾರೆಂದ ಹೇಳಿದ್ದು, ನ್ಯಾಯಾಧಿಕರಣದ ಆದೇಶವನ್ನು ರದ್ದುಗೊಳಿಸಿದರು. ಅಲ್ಲದೆ, ಬಸ್ ನಲ್ಲಿನ ದೋಶದಿಂದ ಪ್ರಯಾಣಿಕರೊಬ್ಬರಿಗೆ ಗಾಯಗಳಾದರೆ ಪರಿಹಾರ ನೀಡುವಂತೆ ಸಾರಿಗೆ ನಿಗಮಕ್ಕೆ ಸೂಚಿಸಿದರು.
ಅರ್ಜಿದಾರರಾಗಿರುವ ಚಂದ್ರಪ್ರಭಾ ಅವರು 2012ರ ಆಗಸ್ಟ್ 22 ರಂದು ಸಂಜೆ 5.30 ಗಂಟೆಗೆ ಕೆಲಸ ಮುಗಿಸಿ ಹೆಚ್.ಡಿ.ಕೋಟೆಯಿಂದ ಮೈಸೂರಿಗೆ ಪ್ರಯಾಣಿಸುತ್ತಿದ್ದರು. ಚಾಲಕನು ಬಸ್ ಅನ್ನು ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದನು. ಈ ವೇಳೆ ಇದ್ದಕ್ಕಿದ್ದಂತೆ ಬಸ್‌ನ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಬಸ್ ನ್ನು ನಿಲ್ಲಿಸಲಾಗಿದ್ದು, ಪ್ರಯಾಣಿಕರು ಇಳಿಯಲು ಆರಂಭಿಸಿದ್ದಾರೆ. ಈ ವೇಳೆ ಚಾಲಕ ಇದ್ದಕ್ಕಿದ್ದಂತೆ ಬಸ್ ಚಾಲನೆಯನ್ನು ಆರಂಭಿಸಿದ್ದಾರೆ. ಪರಿಣಾಮ ಚಂದ್ರಪ್ರಭಾ ಅವರು ಬಿದ್ದಿದ್ದಾರೆ. ಇದರಿಂದ ಬಲಗಾಲಿನ ಮೂಳೆ ಮುರಿತಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


