ವಿಧಾನಸಭಾ ಚುನಾವಣೆ, ಗಡಿ ಗದ್ದಲ ನಡುವಲ್ಲೇ ನಾಳೆ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ
ಸಮೀಪಿಸುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆ, ಗಡಿ ವಿವಾದದ ಕಿಡಿಯ ನಡುವಲ್ಲೇ ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ವಿಧಾನಮಂಡಲದ ಉಭಯ ಸದನಗಳ ಚಳಿಗಾಲ ಅಧಿವೇಶನ ಆರಂಭವಾಗಲಿದೆ.

ಬೆಂಗಳೂರು: ಸಮೀಪಿಸುತ್ತಿರುವ ರಾಜ್ಯ ವಿಧಾನಸಭಾ ಚುನಾವಣೆ, ಗಡಿ ವಿವಾದದ ಕಿಡಿಯ ನಡುವಲ್ಲೇ ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ವಿಧಾನಮಂಡಲದ ಉಭಯ ಸದನಗಳ ಚಳಿಗಾಲ ಅಧಿವೇಶನ ಆರಂಭವಾಗಲಿದೆ.
ಚುನಾವಣೆಗೂ ಮುನ್ನ ಕೊನೆಯ ಅಧಿವೇಶನ ಇದಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಈ ಅಧಿವೇಶನ ಅತ್ಯಂತ ಮಹತ್ವದ್ದಾಗಿದೆ,
ಡಿಸೆಂಬರ್ 30 ರವರೆಗಿನ 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ಆರೋಪ-ಪ್ರತ್ಯಾರೋಪಗಳಿಗೆ ಈ ಅಧಿವೇಶನ ವೇದಿಕೆಯಾಗಲಿದೆ.
ಮುಂದಿನ ಬಜೆಟ್ ಅಧಿವೇಶನ ಕೇವಲ ನೆಪ ಮಾತ್ರ ನಡೆಯುವುದರಿಂದ ಬಹುತೇಕ ಈ ಅಧಿವೇಶನ ರಾಜಕೀಯ ಚಟುವಟಿಕೆಗಳಿಂದಾಗಿ ಮಹತ್ವ ಪಡೆದುಕೊಳ್ಳಲಿದೆ.
ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರ ಮತ್ತು ಹಗರಣಗಳು, ಮತದಾರರ ಮಾಹಿತಿ ಕಳ್ಳತನ, ಗಡಿ ವಿವಾದ ಮತ್ತು ಸರ್ಕಾರದ ವೈಫಲ್ಯಗಳು, ಕೋಮು ಗಲಭೆ ಮತ್ತು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ, ಕಾನೂನು ಸುವ್ಯವಸ್ಥೆ, ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್ಆರ್ಪಿ) ಹೆಚ್ಚಳ ಸೇರಿದಂತೆ ಇತರೆ ರೈತರ ಬೇಡಿಕೆಗಳು ಸೇರಿದಂತೆ ಮುಂತಾದ ವಿಷಯಗಳನ್ನು ಹಿಡಿದು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಹರಿಹಾಯಲು ಸಿದ್ಧತೆ ನಡೆಸಿದೆ.
ಚುನಾವಣೆ ಸಮೀಪಿಸುತ್ತಿರುವ ಕಾರಣ, ವಿರೋಧ ಪಕ್ಷಗಳು ಆಡಳಿತದ ವಿಷಯದ ಬಗ್ಗೆ ಸರ್ಕಾರವನ್ನು ಗುರಿಯಾಗಿಸುವ ಸಾಧ್ಯತೆಯಿದೆ, 2018 ರ ಚುನಾವಣೆಗೆ ಮುಂಚಿತವಾಗಿ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಗಳನ್ನು ಈಡೇರಿಸದೇ ಇರುವುದು, ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಹಲವಾರು ನಗರ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯ ಸಮಸ್ಯೆಗಳು, ಎಸ್'ಸಿ, ಎಸ್'ಟಿ ಮೀಸಲಾತಿ ವಿಚಾರಗಳನ್ನು ವಿಪಕ್ಷಗಳು ಪ್ರಸ್ತಾಪಿಸುವ ಸಾಧ್ಯತೆಗಳಿವೆ.
ಪಂಚಮಸಾಲಿಗಳು ಮತ್ತು ಒಕ್ಕಲಿಗರಂತಹ ವಿವಿಧ ಸಮುದಾಯಗಳ ಮೀಸಲಾತಿ ಸಂಬಂಧಿತ ಬೇಡಿಕೆ, ರಾಜ್ಯದ ಆರ್ಥಿಕ ಸ್ಥಿತಿ ಹಾಗೂ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಷಯವೂ ಈ ಬಾರಿಗ ಅಧಿವೇಶನದಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ.
ಈ ನಡುವೆ ಮಂಗಳೂರು ಬಾಂಬ್ ಸ್ಫೋಟ ಕುರಿತು ವಿಪಕ್ಷಗಳ ನಾಯಕರು ನೀಡಿದ್ದ ಹೇಳಿಕೆಯನ್ನಿಟ್ಟುಕೊಂಡು ಕಾಂಗ್ರೆಸ್ ವಿರುದ್ಧ ಹರಿಹಾಯಲು ಬಿಜೆಪಿ ಯೋಜನೆ ರೂಪಿಸುತ್ತಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


