ಬಾಗಲಕೋಟೆಯಲ್ಲಿ ಮರ್ಯಾದೆ ಹತ್ಯೆ: ಅನ್ಯ ಸಮುದಾಯದವನನ್ನು ಮದುವೆಯಾಗಿದ್ದ ಪುತ್ರಿ; ಅಳಿಯನನ್ನು ಕೊಚ್ಚಿ ಕೊಂದ ತಂದೆ
ಅನ್ಯ ಸಮುದಾಯದವನನ್ನು ಪ್ರೀತಿಸಿ ಮದುವೆ ಆಗಿದ್ದಾಳೆ ಎಂದು ತಂದೆಯೇ ಮಗಳ ಪತಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಮಖಂಡಿ ತಾಲೂಕಿನ ಟಕ್ಕೋಡ ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆ: ಅನ್ಯ ಸಮುದಾಯದವನನ್ನು ಪ್ರೀತಿಸಿ ಮದುವೆ ಆಗಿದ್ದಾಳೆ ಎಂದು ತಂದೆಯೇ ಮಗಳ ಪತಿಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಮಖಂಡಿ ತಾಲೂಕಿನ ಟಕ್ಕೋಡ ಗ್ರಾಮದಲ್ಲಿ ನಡೆದಿದೆ.
ಜಮಖಂಡಿ ತಾಲೂಕಿನ ಟಕ್ಕೋಡ ಗ್ರಾಮದ ಭುಜಬಲ ಕರ್ಜಗಿ (34) ಕೊಲೆಯಾದ ವ್ಯಕ್ತಿ. ಇದೇ ಗ್ರಾಮದ ಭಾಗ್ಯಶ್ರಿ ತಂದೆ ತಮ್ಮನಗೌಡ, ಭುಜಬಲನ ಕಣ್ಣಿಗೆ ಕಾರದ ಪುಡಿ ಎರಚಿ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಒಂದೇ ಗ್ರಾಮದ ಕ್ಷತ್ರೀಯ ಜಾತಿಯ ಭಾಗ್ಯಶ್ರೀ ಹಾಗೂ ಜೈನ ಸಮುದಾಯದ ಭುಜಬಲ ಇಬ್ಬರೂ ಪ್ರೀತಿಸಿ ವರ್ಷದ ಹಿಂದೆ ಮನೆ ಬಿಟ್ಟು ಹೋಗಿ ಮದುವೆ ಆಗಿದ್ದರು. ಬಳಿಕ ಇಬ್ಬರೂ ಟಕ್ಕೋಡ ಗ್ರಾಮದಲ್ಲೇ ಬಂದು ನೆಲೆಸಿದ್ದರು. ಮಗಳ ಮದುವೆಯ ಸೇಡು ಇಟ್ಟುಕೊಂಡಿದ್ದ ತಮ್ಮನಗೌಡ, ಡಿ.17ರ ರಾತ್ರಿ 8.30ಕ್ಕೆ ಅಳಿಯನನ್ನು ಕೊಂದು ಪರಾರಿಯಾಗಿದ್ದಾನೆ.
ಈ ಕೃತ್ಯಕ್ಕೆ ಇಬ್ಬರು ಸ್ನೇಹಿತರು ಸಹಾಯ ಮಾಡಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಘಟನೆ ಸಂಬಂಧ ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


