ಬೆಳಗಾವಿ ಅಧಿವೇಶನ: ನಾಳೆ ವಿಧಾನಸಭೆಯಲ್ಲಿ ಎಸ್ಸಿ,ಎಸ್ಟಿ ಮೀಸಲಾತಿ ಹೆಚ್ಚಳ ವಿಧೇಯಕ ಸೇರಿ 4 ಮಸೂದೆ ಮಂಡನೆ
ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯ್ತು. ಎರಡನೇ ದಿನವಾದ ಮಂಗಳವಾರ ವಿಧಾನಸಭೆಯಲ್ಲಿ ಎಸ್ಸಿ, ಎಸ್ಟಿ ಸಮುದಾಯದ...

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯ್ತು. ಎರಡನೇ ದಿನವಾದ ಮಂಗಳವಾರ ವಿಧಾನಸಭೆಯಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಹಾಗೂ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ವಿಧೇಯಕ ಸೇರಿ ನಾಲ್ಕು ಮಸೂದೆ ಮಂಡನೆಯಾಗಲಿವೆ.
ಆಡಳಿತರೂಢ ಬಿಜೆಪಿ ಸರ್ಕಾರ ಕೆಲವೇ ತಿಂಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಮಂಡನೆಗೆ ಮುಂದಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ನಿರ್ಧಾರವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಈ ಹಿಂದಿನ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.
ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಡಗಳ ಮೀಸಲಾತಿ ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ. ಆದರೆ ಕೇವಲ ಸರ್ಕಾರಿ ಆದೇಶದ ಮೂಲಕ ಮೀಸಲಾತಿ ಹೆಚ್ಚಿಸಿದರೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಮಸೂದೆಯೊಂದನ್ನು ರೂಪಿಸಿ, ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಬಳಿಕ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲಾಗಿದೆ. ಆರು ತಿಂಗಳೊಳಗೆ ತಿದ್ದುಪಡಿ ಮಸೂದೆಗೆ ವಿಧಾನ ಮಂಡಲದ ಒಪ್ಪಿಗೆ ಪಡೆಯಬೇಕು. ನಂತರ ಸಂವಿಧಾನದ ಒಂಭತ್ತನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂಬ ಸಲಹೆಯನ್ನು ನಾಗಮೋಹನ್ ದಾಸ್ ಅವರು ವರದಿ ನೀಡಿದ್ದರು. ಅದರ ಅನ್ವಯ ನಾಳಿನ ಅಧಿವೇಶನದಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ ಮಂಡನೆ ಮಾಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


