ರಾಜ್ಯ

LTTE ಬೆಂಬಲಿಗರಿಗೆ ಅಕ್ರಮ ಶಸ್ತ್ರಾಸ್ತ್ರ, ಮಾದಕ ವಸ್ತು ಮಾರಾಟ; 9 ಮಂದಿ ಎನ್ಐಎ ವಶಕ್ಕೆ

ಭಾರತ ಮತ್ತು ಶ್ರೀಲಂಕಾದಲ್ಲಿ ಎಲ್‌ಟಿಟಿಇ ಬೆಂಬಲಿಗರಿಗೆ ಅಕ್ರಮ ಶಸ್ತ್ರಾಸ್ತ್ರ ಹಾಗೂ ಮಾದಕ ಪದಾರ್ಥಗಳ ಮಾರಾಟ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾದಳ(ಎನ್ ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

LTTE ಬೆಂಬಲಿಗರಿಗೆ ಅಕ್ರಮ ಶಸ್ತ್ರಾಸ್ತ್ರ, ಮಾದಕ ವಸ್ತು ಮಾರಾಟ; 9 ಮಂದಿ ಎನ್ಐಎ ವಶಕ್ಕೆ
ಮಾದಕ ವಸ್ತು ವಶಕ್ಕೆ ಪಡೆದ ಪೊಲೀಸರು
Published On :

ಬೆಂಗಳೂರು: ಭಾರತ ಮತ್ತು ಶ್ರೀಲಂಕಾದಲ್ಲಿ ಎಲ್‌ಟಿಟಿಇ ಬೆಂಬಲಿಗರಿಗೆ ಅಕ್ರಮ ಶಸ್ತ್ರಾಸ್ತ್ರ ಹಾಗೂ ಮಾದಕ ಪದಾರ್ಥಗಳ ಮಾರಾಟ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾದಳ(ಎನ್ ಐಎ) ಅಧಿಕಾರಿಗಳು ಬಂಧಿಸಿದ್ದಾರೆ.

ತಿರುಚಿಯ ಶ್ರೀಲಂಕಾ ಕ್ಯಾಂಪ್‌ನಿಂದ ಗುಣಶೇಖರನ್, ಪುಷ್ಪರಾಜನ್, ಮೊಹಮ್ಮದ್ ಆಸ್ಮಿನ್, ಅಲಹಪ್ಪೆ ಮುರುಗ ಸುನಿಲ್ ಗಾಮಿನಿ, ಸ್ಟ್ಯಾನ್ಲಿ ಕೆನಡಿ ಫರ್ನಾಂಡೊ, ಲಡಿಯಾ ಚಂದ್ರಸೇನ, ಧನುಕ್ಕಾ ರೋಷನ್, ವೆಲ್ಲ ಸುರಂಕ, ತಿಲಿಪ್ಪನ್ ಎಂಬುವವರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. 

ಗುಣಶೇಖರನ್ ಹಾಗೂ ಪುಷ್ಪರಾಜನ್ ದಂಧೆಯ ಕಿಂಗ್ ಪಿನ್‌ಗಳಾಗಿದ್ದು, ಪಾಕಿಸ್ತಾನ ಮೂಲದ ಹಾಜಿ ಸಲೀಂ ಜೊತೆ ಸೇರಿ ಭಾರತ ಹಾಗೂ ಶ್ರೀಲಂಕಾದಲ್ಲಿ ಮಾದಕ ದಂಧೆಯ ವ್ಯವಹಾರ ನಡೆಸುತ್ತಿದ್ದರು. ಬಂಧಿತ ಅಲಹಪ್ಪೆ ಮುರುಗ ಸುನೀಲ್ ಗಾಮಿನಿ ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟಿನ ಮನೆಯೊಂದರಲ್ಲಿ ವಾಸವಾಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಳೆದ ಜುಲೈನಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ವಿವಿಧ ನಗರಗಳಿಗೆ ಆರೋಪಿಗಳು ಮಾದಕ ಪದಾರ್ಥಗಳನ್ನ ಸರಬರಾಜು ಮಾಡಿರುವ ಶಂಕೆಯಿದ್ದು ವಿಚಾರಣೆ ಮುಂದುವರೆದಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.