ಕೆಪಿಟಿಸಿಎಲ್ ಎಇ,ಜೆಇ ನೇಮಕ ಪರೀಕ್ಷೆ; ಜನೆವರಿ ಮೊದಲ ವಾರದಲ್ಲಿ ಫಲಿತಾಂಶ: ಸಚಿವ ಸುನೀಲ್ ಕುಮಾರ್
ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್‌ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನೆವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ವಿಧಾನಸಭೆಗೆ ಇಂದು ತಿಳಿಸಿದರು.

ಬೆಳಗಾವಿ ಸುವರ್ಣಸೌಧ: ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್‌ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನೆವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್ ಕುಮಾರ್ ವಿಧಾನಸಭೆಗೆ ಇಂದು ತಿಳಿಸಿದರು.
ಶೂನ್ಯವೇಳೆಯಲ್ಲಿ ಶಾಸಕ ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಾರದೊಳಗೆ ಕೀ ಉತ್ತರಗಳನ್ನು ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ 5 ತಿಂಗಳ ಹಿಂದೆಯೇ ಪರೀಕ್ಷೆ ನಡೆಸಲಾಗಿದ್ದು, ಫಲಿತಾಂಶ ಇನ್ನೂ ಪ್ರಕಟವಾಗಿಲ್ಲ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುವುದು ಗಮನಕ್ಕಿದ್ದು, ಈ ಕುರಿತು ಕೆಇಎ ಜೊತೆಗೆ ಫಾಲೋಅಫ್ ಮಾಡುತ್ತಿದ್ದೇವೆ. ಈ ವಾರದಲ್ಲಿ ಅಥವಾ ಅಧಿವೇಶನ ಮುಗಿಯುವುದರೊಳಗೆ ಕೀ ಉತ್ತರಗಳನ್ನು ಪ್ರಕಟಿಸಿ,ಜನೆವರಿ ಮೊದಲ ವಾರದೊಳಗೆ ಫಲಿತಾಂಶ ಪ್ರಕಟಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಶಾಸಕ ಸುರೇಶಕುಮಾರ್ ಅವರು ಪರೀಕ್ಷೆ ಬರೆದು ಐದು ತಿಂಗಳಾದರೂ ಫಲಿತಾಂಶ ಪ್ರಕಟವಾಗಿಲ್ಲ;ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಕುರಿತು ಚಾತಕ ಪಕ್ಷಿಯಂತೆ ಕಾಯುತ್ತಿದ್ದು,ಕೂಡಲೇ ಕ್ರಮವಹಿಸುವಂತೆ ಅವರು ಸಚಿವರಲ್ಲಿ ಕೋರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


