ಜ.12 ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವ ಜನೋತ್ಸವ: ಸಿಎಂ ಬಸವರಾಜ ಬೊಮ್ಮಾಯಿ
ಈ ಬಾರಿ ರಾಷ್ಟ್ರೀಯ ಯುವ ಜನೋತ್ಸವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲಾಗಿದ್ದು, ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳಗಾವಿ: ಈ ಬಾರಿ ರಾಷ್ಟ್ರೀಯ ಯುವ ಜನೋತ್ಸವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಸಲಾಗಿದ್ದು, ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು, ಎಲ್ಲ ರಾಜ್ಯಗಳಿಂದ ಸುಮಾರು 7,500 ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದು, ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯಕ್ಕೆ ಈ ಅವಕಾಶ ದೊರೆತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಯುವ ಸಬಲೀಕರಣ ಸಚಿವ ಅನುರಾಗ್ ಠಾಕೂರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ನಾರಾಯಣಗೌಡ, ಆರ್. ಅಶೋಕ್, ಅಶ್ವತ್ಥ ನಾರಾಯಣ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಇಲಾಖಾ ಕಾರ್ಯದರ್ಶಿಗಳೂ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಕೋವಿಡ್ ನಿಯಂತ್ರಣ- ನಾಳೆ ಸಭೆ : ಕೋವಿಡ್ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಗಂಭೀರವಾಗಿ ತೆಗೆದುಕೊಂಡಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು ನಾಳೆ ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


