ಗಡಿ ವಿವಾದ: ಮಹಾರಾಷ್ಟ್ರ ನಡೆ ವಿರುದ್ಧ ಖಂಡನಾ ನಿರ್ಣಯ, ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ
ಮಹಾರಾಷ್ಟ್ರದ ಗಡಿ ವಿವಾದ ಖಂಡಿಸಿ ರಾಜ್ಯ ವಿಧಾನಸಭೆಯಲ್ಲಿ ಇಂದು ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ. ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಖಂಡನಾ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಯಿತು.

ಬೆಳಗಾವಿ: ಮಹಾರಾಷ್ಟ್ರದ ಗಡಿ ವಿವಾದ ಖಂಡಿಸಿ ರಾಜ್ಯ ವಿಧಾನಸಭೆಯಲ್ಲಿ ಇಂದು ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ. ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ ಖಂಡನಾ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಯಿತು.
ನಂತರ ಮಾತನಾಡಿದ ಮುಖ್ಯಮಂತ್ರಿ, ಕರ್ನಾಟಕದ ನೆಲ, ಜಲದ ಹಿತ ಕಾಪಾಡಲು ಮತ್ತು ಕಾನೂನಿನ ಹೋರಾಟದ ಸಮರ್ಥನೆ ಮಾಡಲು, ಈ ಮೂಲಕ ರಾಜ್ಯ ಸರ್ಕಾರ ತನ್ನ ಬದ್ದತೆಯನ್ನು ಪ್ರದರ್ಶಿಸಿದೆ. ಇತ್ತೀಚೆಗೆ ಈ ವಿಷಯದ ಬಗ್ಗೆ ಮಹಾರಾಷ್ಟ್ರದ ನಾಯಕರು ಕೊಡುತ್ತಿರುವ ಎಲ್ಲ ಹೇಳಿಕೆಗಳು ಅತ್ಯಂತ ಖಂಡನೀಯ ಎಂದರು.
ಕರ್ನಾಟಕದ ನೆಲ, ಜಲ, ಭಾಷೆ ಹಾಗೂ ಕನ್ನಡಿಗರ ಹಿತಾಸಕ್ತಿಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಈ ವಿಷಯದಲ್ಲಿ ಕರ್ನಾಟಕದ ಜನರ ಮತ್ತು ಸದಸ್ಯರೆಲ್ಲರ ಭಾವನೆಯು ಒಂದೇ ಆಗಿದ್ದು, ಇದಕ್ಕೆ ಧಕ್ಕೆ ದಾಗ ಎಲ್ಲರೂ ಒಗ್ಗಟ್ಟಿನಿಂದ ರಾಜ್ಯದ ಹಿತಾಸಕ್ತಿ ಹಾಗೂ ರಕ್ಷಣೆಗೆ ಸಂವಿಧಾನಾತ್ಮಕ ಹಾಗೂ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಬದ್ಧರಿದ್ದೇವೆ ಎಂದು ಹಾಗೂ ಮಹಾರಾಷ್ಟ್ರದ ಜನತೆ ಅನಾವಶ್ಯಕವಾಗಿ ಸೃಷ್ಟಿಸಿರುವ ಗಡಿ ವಿವಾದವನ್ನು ಖಂಡಿಸಿ, ರಾಜ್ಯದ ಹಿತರಕ್ಷಣೆಗೆ ಕಟಿಬದ್ಧರಾಗಿರುವುದಾಗಿ ನಿರ್ಣಯ ಕೈಗೊಳ್ಳಲಾಗಿದೆ.
ಖಂಡನಾ ನಿರ್ಣಯವನ್ನು ಸಭಾಧ್ಯಕ್ಷರು ಮತಕ್ಕೆ ಹಾಕಿದರು. ನಂತರ ಸದನ ಸರ್ವಾನುಮತದಿಂದ ಅದನ್ನು ಅಂಗೀಕರಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


