ಸಿಸಿಬಿ ಪೊಲೀಸರ ದಾಳಿ : ಶ್ಯಾಮನೂರು ಶಿವಶಂಕರಪ್ಪ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ಫಾರ್ಮ್‌ನಲ್ಲಿ ಕೃಷ್ಣಮೃಗ- ಚುಕ್ಕೆ ಜಿಂಕೆ ಸೇರಿ ವನ್ಯಜೀವಿಗಳು ಪತ್ತೆ!
ದಾವಣಗೆರೆ ಜಿಲ್ಲೆಯ ಮಾಜಿ ಸಚಿವ ಹಾಗೂ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ಅವರ ರೈಸ್ ಮಿಲ್ನಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ.

ಬೆಂಗಳೂರು: ದಾವಣಗೆರೆ ಜಿಲ್ಲೆಯ ಮಾಜಿ ಸಚಿವ ಹಾಗೂ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ಅವರ ರೈಸ್ ಮಿಲ್ನಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ. ದಾವಣಗೆರೆ ನಗರದ ಬಂಬೂಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್ ಮೇಲೆ ನಿನ್ನೆ ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿವೆ.
ಏಳು ಚುಕ್ಕೆ ಜಿಂಕೆಗಳು, 10 ಕೃಷ್ಣಮೃಗಗಳು, ಏಳು ಕಾಡುಹಂದಿಗಳು, ಮೂರು ಮುಂಗುಸಿಗಳು, ಎರಡು ನರಿಗಳು ಸಿಕ್ಕಿವೆ. ಅವುಗಳನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹೆಬ್ಬಾಳದಲ್ಲಿ ಡಿ.18ರಂದು ಜಿಂಕೆ ಚರ್ಮ, ಕೊಂಬು, ಮೂಳೆ ಮಾರಾಟ ಮಾಡಲು ಬಂದಿದ್ದ ಸೆಂಥಿಲ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು ಆತನ ವಿಚಾರಣೆಗೆ ಒಳಪಡಿಸಿದ್ದರು. ದಾವಣಗೆರೆಯಿಂದ ಚರ್ಮ ತಂದಿರುವುದಾಗಿ ಆತ ಬಾಯ್ಬಿಟ್ಟಿದ್ದ. ಈ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದಾಗ ಜೀವಂತ ವನ್ಯಪ್ರಾಣಿಗಳು ಸಿಕ್ಕಿವೆ’ ಎಂದು ಮೂಲಗಳು ತಿಳಿಸಿವೆ.
ಸಿಸಿಬಿ ಪೊಲೀಸರು ಸೆಂಥಿಲ್‌ನನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಫಾರ್ಮ್‌ನಲ್ಲಿದ್ದ ಕಾರ್ಮಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಮುಂದಿನ ಕ್ರಮಕ್ಕೆ ಪ್ರಕರಣವನ್ನು ಸ್ಥಳೀಯ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


