ಗದಗದಲ್ಲಿ ಶಿಕ್ಷಕನಿಂದಲೇ ವಿದ್ಯಾರ್ಥಿ ಕೊಲೆ: ಚಿಕಿತ್ಸೆ ಫಲಿಸದೆ ಮೃತ ಬಾಲಕನ ತಾಯಿ ಗೀತಾ ಸಾವು; ಅತಿರೇಕದ ಪ್ರೀತಿಗೆ ಇಬ್ಬರ ಬಲಿ!
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿಕ್ಷನಿಂದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಗಾಯಗೊಂಡಿದ್ದ ಶಿಕ್ಷಕಿ ಸಾವನ್ನಪ್ಪಿದ್ದಾರೆ.

ಗದಗ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಜಿಲ್ಲೆಯ ನರಗುಂದ ತಾಲೂಕಿನ ಶಿಕ್ಷನಿಂದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಗಾಯಗೊಂಡಿದ್ದ ಶಿಕ್ಷಕಿ ಸಾವನ್ನಪ್ಪಿದ್ದಾರೆ.
ನರಗುಂದ ತಾಲೂಕಿನ ಹದಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಹತ್ಯೆಗೈದು ಇಬ್ಬರು ಶಿಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಶಿಕ್ಷಕಿ ಗೀತಾ ಚಿಕಿತ್ಸೆ ಫಲಿಸಿದೆ ಗುರುವಾರ ಕೊನೆಯುಸಿರೆಳೆದಿದ್ದಾರೆ. ಸಂಗನಗೌಡ ಪಾಟೀಲ ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮೃತ ಬಾಲಕನ ತಾಯಿ, ಶಿಕ್ಷಕಿ ಗೀತಾ ಬಾರಕೇರ್ ಅವರು ಚಿಕಿತ್ಸೆ ಫಲಿಸದೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೊಲೆ ಆರೋಪಿ ಹದಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೀತಾ ಬಾರಕೇರ್ ಕೂಡ ಇದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


