ರಾಜ್ಯ

ಪಂಚಮಸಾಲಿಗಳು ಸುವರ್ಣ ವಿಧಾನಸೌಧಕ್ಕೆ ನುಗ್ಗುವುದಿಲ್ಲ ಎಂಬ ವಿಶ್ವಾಸವಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಪಂಚಮಸಾಲಿ ಲಿಂಗಾಯತರು ತಮ್ಮ ಬೇಡಿಕೆಗಳ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾಕಾರರ ಸಂಖ್ಯೆಗೆ ಅನುಗುಣವಾಗಿ ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ.

ಪಂಚಮಸಾಲಿಗಳು ಸುವರ್ಣ ವಿಧಾನಸೌಧಕ್ಕೆ ನುಗ್ಗುವುದಿಲ್ಲ ಎಂಬ ವಿಶ್ವಾಸವಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
Published On :

ಬೆಳಗಾವಿ: ಪಂಚಮಸಾಲಿ ಲಿಂಗಾಯತರು ತಮ್ಮ ಬೇಡಿಕೆಗಳ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾಕಾರರ ಸಂಖ್ಯೆಗೆ ಅನುಗುಣವಾಗಿ ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನಾನಿರತ ಪಂಚಮಸಾಲಿಗಳು ವಿಧಾನಸೌಧಕ್ಕೆ ನುಗ್ಗುವುದಿಲ್ಲ ಎಂಬ ವಿಶ್ವಾಸವಿದೆ. ಪ್ರತಿಭಟನೆಗೆ ಪಂಚಮಸಾಲಿಗಳಿಗೆ ಸ್ಥಳಾವಕಾಶ ನೀಡಲಾಗಿದೆ. ಅದಕ್ಕೆ ಅನುಗುಣವಾಗಿ ಪೊಲೀಸ್ ನಿಯೋಜನೆ ಹಾಗೂ ಇತರೆ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಗಡಿ ವಿವಾದ ಕುರಿತು ಸಂಜಯ್ ರಾವತ್ ನೀಡಿದ್ದ ಹೇಳಿಕೆ ಕುರಿತು ಮಾತನಾಡಿ, ಅವರ ಭಾಷೆ ಅವರ ಅಪ್ರಬುದ್ಧತೆಯನ್ನು ತೋರಿಸುತ್ತದೆ. ಅವರಿಗೆ ಚೀನಾ-ಭಾರತ ಗಡಿ ಮತ್ತು ಮಹಾರಾಷ್ಟ್ರ-ಕರ್ನಾಟಕ ನಡುವಿನ ವ್ಯತ್ಯಾಸ ತಿಳಿದಿಲ್ಲ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಜೀವಿಸುತ್ತಿದ್ದೇವೆ ಮತ್ತು ಮಹಾರಾಷ್ಟ್ರ ಸರ್ಕಾರವು ಇಂತಹ ಬೆಳವಣಿಗೆಗಳಿಗೆ ಅವಕಾಶ ನೀಡುವುದಿಲ್ಲ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ.

ನಾವು ನಮ್ಮ ನಿಲುವಿಗೆ ಬದ್ಧರಾಗಿದ್ದೇವೆ. ಯಾವುದೇ ಸಂಘಟನೆ ಅಥವಾ ವ್ಯಕ್ತಿ ಎರಡು ರಾಜ್ಯಗಳ ನಡುವೆ ಸಮಸ್ಯೆಯನ್ನು ಸೃಷ್ಟಿಸಲು ಪ್ರಯತ್ನಿಸಿದರೆ ಅದನ್ನು ಯಾವ ರೀತಿ ಎದುರಿಸಬೇಕೆಂಬುದು ನಮಗೆ ತಿಳಿದಿದೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.