ಜೇವರ್ಗಿ ಭೀಕರ ಅಪಘಾತ; ಲಾರಿ-ಟ್ರಾವೆಲರ್ ಡಿಕ್ಕಿ: ಚಾಲಕ ಸೇರಿ ಇಬ್ಬರ ಸಾವು
ಲಾರಿ-ಟೆಂಪೋ ಟ್ರಾವೆಲರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಜೇವರ್ಗಿ ಇಂದು ಮುಂಜಾನೆ ಸಂಭವಿಸಿದೆ.

ಜೇವರ್ಗಿ: ಲಾರಿ-ಟೆಂಪೋ ಟ್ರಾವೆಲರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಜೇವರ್ಗಿ ಇಂದು ಮುಂಜಾನೆ ಸಂಭವಿಸಿದೆ.
ಜೇವರ್ಗಿ ಹೊರವಲಯದ ಗೌನಳ್ಳಿ ಕ್ರಾಸ್ ಹತ್ತಿರ ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಈ ದುರಂತ ನಡೆದಿದ್ದು, ಲಾರಿ ಮತ್ತು ಟ್ರಾವೆಲರ್ ನಡುವೆ ಡಿಕ್ಕಿ ಸಂಭವಿಸಿ ಟ್ರಾವೆಲರ್ ಚಾಲಕ ಸೇರಿ ಇಬ್ಬರು ಮೃತಪಟ್ಟು, 14 ಜನರು ಗಾಯಗೊಂಡಿದ್ದಾರೆ.
ಮೃತರನ್ನು ಚಾಲಕ ಅಪ್ಪು ಕಲಬುರಗಿ(34) ಮತ್ತು ಹಾಗರಗುಂಡಗಿ ಗ್ರಾಮದ ಸಂಜೀವಕುಮಾರ (35) ಎಂದು ಗುರುತಿಸಲಾಗಿದೆ. ಹಾಗರಗುಂಡಗಿ ಗ್ರಾಮದ ಸುಮಾರು 14 ಜನ ಟ್ರಾವೆಲರ್‍ನಲ್ಲಿ ಕರ್ನಾಟಕ ಪ್ರವಾಸ ಕೈಗೊಂಡಿದ್ದರು. ಪ್ರವಾಸ ಮುಗಿಸಿಕೊಂಡು ಮರಳಿ ಹಾಗರಗುಂಡಗಿ ಗ್ರಾಮಕ್ಕೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ 11 ಜನರಿಗೆ ಸಣ್ಣಪುಟ್ಟಗಾಯಗಳಾಗಿದ್ದು, 4-5 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


