ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸದಿದ್ದಲ್ಲಿ ಸಿಎಂ ಮನೆಗೆ ಮುತ್ತಿಗೆ- ಕುರುಬೂರು ಶಾಂತಕುಮಾರ್
ಡಿಸೆಂಬರ್ 30ಕ್ಕೂ ಮುಂಚಿತವಾಗಿ ಪ್ರತಿ ಟನ್ ಕಬ್ಬಿಗೆ ರೂ. 3,500 ದರ ಸರ್ಕಾರ ಘೋಷಿಸಬೇಕು, ಇಲ್ಲವಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಳೂರು ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಶನಿವಾರ ಎಚ್ಚರಿಕೆ ನೀಡಿದರು.

ಬೆಳಗಾವಿ: ಡಿಸೆಂಬರ್ 30ಕ್ಕೂ ಮುಂಚಿತವಾಗಿ ಪ್ರತಿ ಟನ್ ಕಬ್ಬಿಗೆ ರೂ. 3,500 ದರ ಸರ್ಕಾರ ಘೋಷಿಸಬೇಕು, ಇಲ್ಲವಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಳೂರು ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಶನಿವಾರ ಎಚ್ಚರಿಕೆ ನೀಡಿದರು.
ಕಬ್ಬು ಬೆಳೆಗಾರರಿಗೆ ನ್ಯಾಯಯುತವಾಗಿ ಬೆಲೆ ಹೆಚ್ಚಳ ಮಾಡಲಾಗುವುದು ಮತ್ತು ಸಾಗಣೆ ವೆಚ್ಚ ಕಡಿಮೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ 10 ದಿನಗಳ ಹಿಂದೆ ನೀಡಿದ್ದ ಭರವಸೆಯನ್ನು ಪೂರ್ಣಗೊಳಿಸಬೇಕು, ಬೆಂಗಳೂರಿನಲ್ಲಿ ಕಳೆದ 33 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಡಿಸೆಂಬರ್ 26 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಲು ನಿರ್ಧರಿಸಿದ್ದೇವೆ ಎಂದು ಅವರು ತಿಳಿಸಿದರು.
ಕಳೆದ ನಾಲ್ಕು ತಿಂಗಳಿಂದ ಕಬ್ಬು ಅರೆಯುತ್ತಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಎಫ್‌ಆರ್‌ಪಿ ಪಾವತಿಸಿಲ್ಲ, ಅದನ್ನು 14 ದಿನಗಳಲ್ಲಿ ತೆರವುಗೊಳಿಸಬೇಕು, ಕೆಲವರು ಭಾಗಶಃ ಬಿಲ್ ಪಾವತಿಸಿ ಸಾವಿರಾರು ಕೋಟಿ ಬಾಕಿ ಉಳಿಸಿಕೊಂಡಿದ್ದಾರೆ. ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಕಬ್ಬು ತೂಕ ಮಾಡುವಲ್ಲಿ ಸಕ್ಕರೆ ಕಾರ್ಖಾನೆಗಳಿಂದ ವಂಚನೆಯಾಗಿದೆ ಎಂದು ರೈತರು ನೀಡಿದ ದೂರುಗಳ ಆಧಾರದ ಮೇಲೆ ಸಕ್ಕರೆ ಆಯುಕ್ತರ ಕಚೇರಿ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆಸಿದ್ದು, ದಾಳಿ ಕುರಿತು ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಅವರು ಹೇಳಿದರು. ಕಟಾವು ಮಾಡಿದ ಕಬ್ಬಿನ ಒಟ್ಟು ತೂಕದಲ್ಲಿ ಸಕ್ಕರೆ ಕಾರ್ಖಾನೆಗಳು ಅಕ್ರಮವಾಗಿ ಶೇ. 7ರಷ್ಟು ಕಡಿತಗೊಳಿಸುತ್ತಿವೆ. ಇಂತಹ ಅಕ್ರಮದ ವಿರುದ್ಧ ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಆಯುಕ್ತರು ಕ್ರಮ ಕೈಗೊಳ್ಳಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


