ಹುಬ್ಬಳ್ಳಿ ಧಾರವಾಡದಲ್ಲಿ ರಾಷ್ಟ್ರೀಯ ಯುವ ಜನೋತ್ಸವ: ನಟ ಅಕ್ಷಯ್ ಕುಮಾರ್ ಗೆ ಆಹ್ವಾನ
ಅವಳಿ ನಗರ ಹುಬ್ಬಳ್ಳಿ- ಧಾರವಾಡದಲ್ಲಿ ಜನವರಿ 12ರಿಂದ 16ರವರೆಗೆ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ.

ಧಾರವಾಡ: ಅವಳಿ ನಗರ ಹುಬ್ಬಳ್ಳಿ- ಧಾರವಾಡದಲ್ಲಿ ಜನವರಿ 12ರಿಂದ 16ರವರೆಗೆ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಅವರನ್ನು ಆಹ್ವಾನಿಸಲಾಗಿದೆ.
ಧಾರವಾಡದ ವಿವಿಧ ಕಡೆಗಳಲ್ಲಿ ಯುವ ಜನೋತ್ಸವ ಆಯೋಜನೆ ಮಾಡಲು ಸೂಕ್ತ ಸ್ಥಳ ವೀಕ್ಷಣೆ ನಂತರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿ ನಡೆಸುವಾಗಲೇ ಅಕ್ಷಯ್ ಕುಮಾರ್ ಅವರಿಗೆ ಕರೆ ಮಾಡಿ, ಯುವಜನೋತ್ಸವಕ್ಕೆ ಆಹ್ವಾನಿಸಿದರು. ಜ. 16ರಂದು ನಡೆಯುವ ಸಮಾರೋಪಕ್ಕೆ ಆಗಮಿಸುವಂತೆ ಜೋಶಿ, ಅಕ್ಷಯ ಕುಮಾರ್ಗೆ ಹೇಳಿದರು. ಆದರೆ ಜ. 12ರಂದೇ ಬರುತ್ತೇನೆ ಎಂದು ಅಕ್ಷಯ್ ಕುಮಾರ್ ಹೇಳಿದರು. ಆದರೆ ಪ್ರಧಾನಿ ಕಾರ್ಯಕ್ರಮ ಭದ್ರತೆ ವಿಷಯ ಇರುತ್ತೆ ಎಂದು ಜೋಶಿ ಹೇಳಿದರು.
ಐದು ದಿನಗಳ ಕಾರ್ಯಕ್ರಮಕ್ಕೆ ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದು, ವಿವಿಧ ರಾಜ್ಯಗಳಿಂದ ಸುಮಾರು 7,500 ಪ್ರತಿನಿಧಿಗಳು ಇದರಲ್ಲಿ ಭಾಗಿಯಾಗುತ್ತಾರೆ. ಅಂದು ನಾಡು ನುಡಿ ನಮ್ಮ ಸಾಂಸ್ಕೃತಿಕ ಬಿಂಬಿಸುವ ಅನೇಕ ಜಾನಪದ, ಸಾಂಸ್ಕೃತಿಕ ಕಾರ್ಯಕ್ರಮಗಳು, ಆಹಾರ ಮೇಳಗಳು ಸಹ ಇರುತ್ತವೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


