ರಾಜ್ಯ

ಬೆಳಗಾವಿ ಜಿಲ್ಲಾಸ್ಪತ್ರೆಗೆ ಸಚಿವರಾದ ಡಾ. ಕೆ. ಸುಧಾಕರ್, ಆರ್. ಅಶೋಕ್  ಭೇಟಿ: ಪರಿಶೀಲನೆ

ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಸೋಮವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬೆಳಗಾವಿ ಜಿಲ್ಲಾಸ್ಪತ್ರೆಗೆ ಸಚಿವರಾದ ಡಾ. ಕೆ. ಸುಧಾಕರ್, ಆರ್. ಅಶೋಕ್  ಭೇಟಿ: ಪರಿಶೀಲನೆ
ಡಾ. ಕೆ. ಸುಧಾಕರ್, ಆರ್. ಅಶೋಕ್ ಅವರ ಚಿತ್ರ
Published On :

ಬೆಳಗಾವಿ: ವಿಶ್ವದ ಕೆಲವು ದೇಶಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಸೋಮವಾರ ಭೇಟಿ ನೀಡಿ,  ಪರಿಶೀಲನೆ ನಡೆಸಿದರು.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ. ಕೆ. ಸುಧಾಕರ್, ಆಸ್ಪತ್ರೆ ಭೇಟಿ ವೇಳೆ ಅಲ್ಲಿನ  ಆರೋಗ್ಯ ವ್ಯವಸ್ಥೆಯ ಸಿದ್ಧತೆಗಳನ್ನು ಪರೀಶಿಲಿಸಲಾಯಿತು.

ಆಕ್ಸಿಜನ್ ಘಟಕ, ತೀವ್ರ ನಿಗಾ ಘಟಕ, ಔಷಧಿ ದಾಸ್ತಾನು ಸೇರಿದಂತೆ ಆಸ್ಪತ್ರೆಯ ಮೂಲಸೌಕರ್ಯಗಳ ವಿವರ ಪಡೆದು, ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ರಾಜ್ಯದ ಆಸ್ಪತ್ರೆಗಳಲ್ಲಿ ಸಿದ್ಧತೆಯನ್ನು ಖಾತ್ರಿ ಪಡಿಸಿಕೊಳ್ಳಲು ನಾಳೆ ಅಣಕು ಡ್ರಿಲ್ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.