ರಾಜ್ಯ

ಚಾಮರಾಜನಗರ: ಬಿಸಲವಾಡಿಯಲ್ಲಿ ಕಲ್ಲು ಕ್ವಾರಿ ಕುಸಿದು ಮೂವರ ದುರ್ಮರಣ!

ಬಿಸಲವಾಡಿಯಲ್ಲಿ ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ: ಬಿಸಲವಾಡಿಯಲ್ಲಿ ಕಲ್ಲು ಕ್ವಾರಿ ಕುಸಿದು ಮೂವರ ದುರ್ಮರಣ!
ಪ್ರತ್ಯಕ್ಷ ದೃಶ್ಯ
Published On :

ಚಾಮರಾಜನಗರ: ಬಿಸಲವಾಡಿಯಲ್ಲಿ ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. 

ಮೃತರನ್ನು 28 ವರ್ಷದ ಕುಮಾರ್ ಹಾಗೂ 35 ವರ್ಷದ ಶಿವರಾಜು ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕ ಸಿದ್ದರಾಜು ಪರಿಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.

ಮೃತರು ಕಾಗಲವಾಡಿಯ ಮೊಳೆ ಗ್ರಾಮದವರಾಗಿದ್ದು ಕ್ವಾರಿಗೆ ಕುಳಿ ಹೊಡೆಯಬೇಕಾದರೆ ಈ ಅವಘಡ ಸಂಭವಿಸಿದೆ. ಕಲ್ಲುಬಂಡೆಗಳ ರಾಶಿ ಕಾರ್ಮಿಕರ ಮೇಲೆ ಬಿದ್ದಿದ್ದರಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.