ರಾಜ್ಯ

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಜಗಳ; ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರ ಬರ್ಬರ ಹತ್ಯೆ

ತಾಲ್ಲೂಕಿನ ಶಿಂಧೋಳಿ ಗ್ರಾಮದಲ್ಲಿ ಭಾನುವಾರ ರಾತ್ರಿ, ಹೊನಲು ಬೆಳಕಿನ ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಜಗಳ; ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರ ಬರ್ಬರ ಹತ್ಯೆ
ಕೊಲೆಯಾದ ಯುವಕರು
Published On :

ಬೆಳಗಾವಿ: ತಾಲ್ಲೂಕಿನ ಶಿಂಧೋಳಿ ಗ್ರಾಮದಲ್ಲಿ ಭಾನುವಾರ ರಾತ್ರಿ, ಹೊನಲು ಬೆಳಕಿನ ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಶಿಂಧೋಳಿ ಗ್ರಾಮದ ಬಸವರಾಜ (24) ಹಾಗೂ ಗಿರೀಶ (28) ಕೊಲೆಯಾದವರು. ಶಿಂಧೋಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ ಏರ್ಪಡಿಸಲಾಗಿತ್ತು. ಸಂಜೆ 7ರ ಸುಮಾರಿಗೆ ಯುವಕರು ಆಟವಾಡುತ್ತಿದ್ದರು.

ಇದೇ ವೇಳೆ ಹಾಲಿನ ಡೇರಿಯ ವಾಹನ ಓಡಿಸುವ ಚಾಲಕ ಇದೇ ಸ್ಥಳಕ್ಕೆ ಬಂದು ವಾಹನ ನಿಲ್ಲಿಸಿದ. ಈ ವೇಳೆ ಕ್ರಿಕೆಟ್ ಆಡುವ ಇಬ್ಬರು ಯುವಕರು ಹಾಗೂ ವಾಹನ ಚಾಲಕನ ಮಧ್ಯೆ ಮಾತಿಗೆ ಮಾತು ಬೆಳೆಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಒಬ್ಬರಿಗೊಬ್ಬರು ಹೊಡೆದಾಡತೊಡಗಿದರು.

ಇದರ ಮಧ್ಯೆಯೇ ತನ್ನ ಬಳಿ ಇದ್ದ ಚಾಕು ತಂದ ಡೇರಿ ವಾಹನದ ಚಾಲಕ ಇಬ್ಬರೂ ಯುವಕರ ಮೇಲೆ ಹಲ್ಲೆ ಮಾಡಿದ. ಮನಸೋ ಇಚ್ಛೆ ಚುಚ್ಚಿದ ಎಂದು ಜತೆಯಲ್ಲಿದ್ದವರು ಮಾಹಿತಿ ನೀಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಯುವಕರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆ ಮುಟ್ಟುವುದರಲ್ಲಿ ಇಬ್ಬರೂ ಕೊನೆಯುಸಿರೆಳೆದಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.