ಜನವರಿಯಲ್ಲಿ ರಾಜ್ಯದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಮಹಿಳಾ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಜನವರಿ 20 ಮತ್ತು 21, 2023 ರಂದು ಕರ್ನಾಟಕದ ತುಮಕೂರಿನಲ್ಲಿ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮತ್ತು 2024 ರ ಲೋಕಸಭೆ ಚುನಾವಣೆ ಕುರಿತು ಚರ್ಚೆಗಳು ನಡೆಯಲಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಮಹಿಳಾ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಜನವರಿ 20 ಮತ್ತು 21, 2023 ರಂದು ಕರ್ನಾಟಕದ ತುಮಕೂರಿನಲ್ಲಿ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮತ್ತು 2024 ರ ಲೋಕಸಭೆ ಚುನಾವಣೆ ಕುರಿತು ಚರ್ಚೆಗಳು ನಡೆಯಲಿದೆ ಎಂದು ತಿಳಿದುಬಂದಿದೆ.
ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಮಾತನಾಡಲಿದ್ದಾರೆ. ಮಹಿಳಾ ಮೋರ್ಚಾದ ಅಧ್ಯಕ್ಷೆ ವನಾರ್ಥಿ ಶ್ರೀನಿವಾಸನ್ ಸೇರಿದಂತೆ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ವರದಿಗಳು ತಿಳಿಸಿವೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಹಿಳಾ ಮೋರ್ಚಾ ಅಧ್ಯಕ್ಷೆ ವನಾರ್ಥಿ ಶ್ರೀನಿವಾಸನ್ ಅವರು, ಸಭೆಯಲ್ಲಿ ಎಲ್ಲಾ ಅಂಶಗಳನ್ನು ಒಳಗೊಂಡ ಮಹಿಳೆಯರ ಸಮಸ್ಯೆಗಳ ಬಗ್ಗೆ ಆಳವಾದ ಚರ್ಚೆ ನಡೆಯಲಿದೆ. ಪ್ರಧಾನಿ ಮೋದಿ ಯಾವಾಗಲೂ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಾರೆ ಮತ್ತು ಯಾವಾಗಲೂ ಮಹಿಳೆಯರ ಹೆಚ್ಚುವರಿ ಭಾಗವಹಿಸುವಿಕೆಯನ್ನು ಬಯಸುತ್ತಾರೆ. ನಾವು ಮಹಿಳೆಯರಿಗಾಗಿ ನಡೆಯುತ್ತಿರುವ ನೀತಿಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಚರ್ಚಿಸುತ್ತೇವೆ. ಮುಂದಿನ ವರ್ಷ G20 ಸಮಾವೇಶದಲ್ಲಿ ಮಹಿಳೆಯರ ಭಾಗವಹಿಸುವಿಕೆ ಕುರಿತು ಚರ್ಚೆಗಳು ನಡೆಯಲಿವೆ, ಮುಂದಿನ ವರ್ಷ ವಿಧಾನಸಭೆ ಚುನಾವಣೆಯೂ ಇದೆ, ಈ ಚುನಾವಣೆಯಲ್ಲಿ ನಮ್ಮ ಪಾತ್ರದ ಕುರಿತು ಹಾಗೂ ಇತರೆ ವಿಚಾರಗಳ ಕುರಿತು ಚರ್ಚೆಗಳನ್ನು ನಡೆಸುತ್ತೇವೆಂದು ಹೇಳಿದ್ದಾರೆ.
ಅಲ್ಲದೆ, ಲೋಕಸಭೆ 2024 ರ ಚುನಾವಣೆ ಕುರಿತಂತೆಯೂ ಚರ್ಚಿಸಲಾಗುವುದು. ಚುನಾವಣೆಯಲ್ಲಿ ಯಶಸ್ಸು ಗಳಿಸಲು ಹೊಸ ಯೋಜನೆಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


