ಬೆಳಗಾವಿ ಅಧಿವೇಶನ: ಕಾಂಗ್ರೆಸ್ ಹಿರಿಯ ನಾಯಕ ಆರ್ ವಿ ದೇಶಪಾಂಡೆಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ (Winter Session in Belagavi) 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಾಂಗ್ರೆಸ್ ನ ಹಿರಿಯ ನಾಯಕ ಆರ್ ವಿ ದೇಶಪಾಂಡೆಯವರಿಗೆ ನೀಡಲಾಯಿತು.

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ (Winter Session in Belagavi) 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಾಂಗ್ರೆಸ್ ನ ಹಿರಿಯ ನಾಯಕ ಆರ್ ವಿ ದೇಶಪಾಂಡೆಯವರಿಗೆ ನೀಡಲಾಯಿತು.
ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆಗೆ (Raghunath Vishwanath Rao Deshpande) ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಕಳೆದ ವರ್ಷ ಶಿಕಾರಿಪುರ ಕ್ಷೇತ್ರದ ಶಾಸಕ ಬಿ ಎಸ್ ಯಡಿಯೂರಪ್ಪ ಅವರ ಪಾಲಾಗಿತ್ತು. ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಳೆದ ವರ್ಷದಿಂದ ನೀಡಲಾಗುತ್ತಿದೆ.
75 ವರ್ಷ ವಯಸ್ಸಿನ ಹಿರಿಯ ನಾಯಕ ದೇಶಪಾಂಡೆ ಅವರು ಇದುವರೆಗೆ 9 ಬಾರಿ ವಿಧಾನಸಭೆ ಚುನಾವಣೆ ಎದುರಿಸಿದ್ದಾರೆ. ದೇಶಪಾಂಡೆ ಅವರು ತಮ್ಮ ಹುಟ್ಟೂರಾದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಅಸೆಂಬ್ಲಿ ಕ್ಷೇತ್ರವನ್ನು ಕಾಂಗ್ರೆಸ್ ವತಿಯಿಂದ ಪ್ರತಿನಿಧಿಸಿದ್ದಾರೆ.
1947 ಮಾರ್ಚ್ 16ರಂದು ಜನಿಸಿದ ದೇಶಪಾಂಡೆ ಅವರು ಬಿಎ, ಎಲ್ಎಲ್ಬಿ ವ್ಯಾಸಂಗ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಸಾರ್ವಜನಿಕ ಸೇವೆಗೆ ಅಂಕಿತರಾದ ದೇಶಪಾಂಡೆ ಅವರು ಜನತಾಪರಿವಾರದೊಂದಿಗೆ ವಿಧಾನಸಭೆ ಪ್ರವೇಶಿಸಿದರು. ಎಸ್ ಎಂ ಕೃಷ್ಣ ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಅತ್ಯಂತ ದೀರ್ಘಾವಧಿಗೆ 13 ವರ್ಷ ಕಾಲ ಕೈಗಾರಿಕಾ ಸಚಿವರಾಗಿದ್ದರು.
ಪೂರ್ವ ನಿಗದಿ ಪ್ರಕಾರ ನಾಡಿದ್ದು ಶುಕ್ರವಾರ ಬೆಳಗಾವಿ ಅಧಿವೇಶನ ಮುಗಿಯಬೇಕಾಗಿದೆ. ಆದರೆ ನಿಗದಿತ ಅವಧಿಗಿಂತ ಒಂದು ದಿನ ಮೊದಲೇ ನಾಳೆ ಗುರುವಾರವೇ ವಿಧಾನಮಂಡಲ ಅಧಿವೇಶನ ಅಂತ್ಯವಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


