ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ
ಎರಡು ದಿನಗಳ ಭೇಟಿಗಾಗಿ ಕೇಂದ್ರ ಗೃಹ ವ್ಯವಹಾರಗಳು ಮತ್ತು ಸಹಕಾರ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದರು.

ಬೆಂಗಳೂರು: ಎರಡು ದಿನಗಳ ಭೇಟಿಗಾಗಿ ಕೇಂದ್ರ ಗೃಹ ವ್ಯವಹಾರಗಳು ಮತ್ತು ಸಹಕಾರ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದರು.
ವಾಯುಪಡೆಯ ವಿಶೇಷ ವಿಮಾನದಲ್ಲಿ ಯಲಹಂಕ ವಾಯುನೆಲೆಯಲ್ಲಿ ಬಂದಿಳಿದ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತಿತರರು ಪುಷ್ಪ ಗುಚ್ಚ ನೀಡುವ ಮೂಲಕ ಮೂಲಕ ಬರಮಾಡಿಕೊಂಡರು.
ನಂತರ ರಸ್ತೆ ಮೂಲಕ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಗೆ ಅಮಿತ್ ಶಾ ತೆರಳಿದರು. ಅಲ್ಲಿ ವಾಸ್ತವ್ಯ ಹೂಡಿರುವ ಅಮಿತ್ ಶಾ, ನಾಳೆ ಮಂಡ್ಯದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೇ ಮದ್ದೂರಿನ ಗೆಜ್ಜಲಗೆರೆಯಲ್ಲಿ ಮೆಗಾ ಡೇರಿಯನ್ನು ಉದ್ಘಾಟಿಸಲಿದ್ದಾರೆ. ತದನಂತರ ಬೆಂಗಳೂರಿನಲ್ಲಿ ನಡೆಯಲಿರುವ ಸಹಕಾರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


