ಬೆಳಗಾವಿ: ಹಿಂಡಲಗಾ ಜೈಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಢೀರ್ ಭೇಟಿ: ಸೌಕರ್ಯಗಳ ಪರಿಶೀಲನೆ
ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಒಂದು ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸ್ವಾತಂತ್ರ್ಯವೀರ ಸಾವರ್ಕರ್ ಅವರನ್ನು ಬಂಧಿಸಿಡಲಾಗಿದ್ದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ, ಅಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿದರು.

ಬೆಳಗಾವಿ: ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಒಂದು ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸ್ವಾತಂತ್ರ್ಯವೀರ ಸಾವರ್ಕರ್ ಅವರನ್ನು ಬಂಧಿಸಿಡಲಾಗಿದ್ದ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ, ಅಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಈ ಕೇಂದ್ರ ಕಾರಾಗೃಹದಲ್ಲಿ 800ಕ್ಕೂ ಹೆಚ್ಚು ಕೈದಿಗಳಿದ್ದಾರೆ. ಇಲ್ಲಿ ಸಿಗುವ ಸೌಲಭ್ಯಗಳು ಮತ್ತು ಕೊರತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾಗಿ ತಿಳಿಸಿದರು.
ರಾಜ್ಯ ಸರ್ಕಾರ ಉತ್ತರ ಕರ್ನಾಟಕಕ್ಕೆ ಯಾವುದೇ ರೀತಿಯ ತಾರತಮ್ಯ ಮಾಡುವುದಿಲ್ಲ. ಅದರ ಅಭಿವೃದ್ಧಿ ಬಗ್ಗೆ ನಿನ್ನೆಯೂ ಚರ್ಚಿಸಿದ್ದೇವೆ’ ಎಂದರು. ಬಿಜೆಪಿ ನೇತೃತ್ವದ ಕರ್ನಾಟಕ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಜ್ಞಾನೇಂದ್ರ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


