ರಾಜ್ಯ

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವೀರ ಸಾವರ್ಕರ್ ಭಾವಚಿತ್ರ ಅನಾವರಣ: ಶಿಕ್ಷಣ ಸಚಿವ ನಾಗೇಶ್ ಭಾಗಿ

ಇಂದು ಗುರುವಾರ ಡಿಸೆಂಬರ್ 29ರಂದು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸಲಾಯಿತು.

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವೀರ ಸಾವರ್ಕರ್ ಭಾವಚಿತ್ರ ಅನಾವರಣ: ಶಿಕ್ಷಣ ಸಚಿವ ನಾಗೇಶ್ ಭಾಗಿ
ವೀರ ಸಾವರ್ಕರ್ (ಫೋಟೋ ಕೃಪೆ-ಫೇಸ್ ಬುಕ್)
Published On :

ಬೆಳಗಾವಿ: ಇಂದು ಗುರುವಾರ ಡಿಸೆಂಬರ್ 29ರಂದು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸಲಾಯಿತು. 

ಶಿಕ್ಷಣ ಸಚಿವ ಬಿ ಸಿ ನಾಗೇಶ್ ಸಮ್ಮುಖದಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸಿ ಅದಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಲಾಯಿತು.

1950 ರ ಏಪ್ರಿಲ್ 4 ರಿಂದ ಜುಲೈ 13 ರವರೆಗೆ 99 ದಿನಗಳ ಕಾಲ ಹಿಂಡಲಗಾ ಜೈಲಿನಲ್ಲಿ ಸಾವರ್ಕರ್ ಅವರನ್ನು ಕೈದಿಯಾಗಿ ಬಂಧನದಲ್ಲಿರಿಸಲಾಗಿತ್ತು. ಈ ಕಾರಣದಿಂದ ಹಿಂದೂವಾದಿ, ಸಮಾಜಸುಧಾರಕ ಸಾವರ್ಕರ್ ಫೋಟೋವನ್ನು ಜೈಲಿನೊಳಗೆ ಅಳವಡಿಸಬೇಕೆಂಬ ಒತ್ತಾಯ ಕೇಳಿಬರುತ್ತಿತ್ತು. 

ಫೋಟೋವನ್ನು ಅನಾವರಣಗೊಳಿಸಿದ ನಂತರ ಅಲ್ಲಿದ್ದವರು ಸ್ವತಂತ್ರ ವೀರ ದಾಮೋದರ್ ಸಾವರ್ಕರ್ ಅವರಿಗೆ ಜಯವಾಗಲಿ, ಬೋಲೋ ಭಾರತ್ ಮಾತಾ ಕಿ ಜೈ ಎಂದು ಕೂಗಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.