ಮಂಡ್ಯದ ಗೆಜ್ಜಲಗೆರೆಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಮೆಗಾ ಡೇರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ
ಕರ್ನಾಟಕಲ್ಲೀಗ ಎಲೆಕ್ಷನ್ ಸಮಯ. ಇನ್ನು ಮೂರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹೊತ್ತಿನಲ್ಲಿ ಬಿಜೆಪಿ ಹೈಕಮಾಂಡ್ ಅಮಿತ್ ಶಾ ಆಗಮನ ಕರ್ನಾಟಕಕ್ಕೆ ಆಗಿದೆ. ಎಲೆಕ್ಷನ್ಗೆ ಬಿಜೆಪಿ ರಣಕಹಳೆ ಜೋರಾಗಿದ್ದು, ಅಮಿತ್ ಶಾ ಅವರು ಮಂಡ್ಯದಿಂದಲೇ ರಣತಂತ್ರ ಆರಂಭಿಸಿದ್ದಾರೆ.

ಮಂಡ್ಯ: ಕರ್ನಾಟಕಲ್ಲೀಗ ಎಲೆಕ್ಷನ್ ಸಮಯ. ಇನ್ನು ಮೂರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹೊತ್ತಿನಲ್ಲಿ ಬಿಜೆಪಿ ಹೈಕಮಾಂಡ್ ಅಮಿತ್ ಶಾ ಆಗಮನ ಕರ್ನಾಟಕಕ್ಕೆ ಆಗಿದೆ. ಎಲೆಕ್ಷನ್ಗೆ ಬಿಜೆಪಿ ರಣಕಹಳೆ ಜೋರಾಗಿದ್ದು, ಅಮಿತ್ ಶಾ ಅವರು ಮಂಡ್ಯದಿಂದಲೇ ರಣತಂತ್ರ ಆರಂಭಿಸಿದ್ದಾರೆ. ಅಮಿತ್ ಶಾ ಮಂಡ್ಯದ ಮೆಗಾ ಡೈರಿ ಉದ್ಘಾಟಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು, ಸಿಎಂ ಬೊಮ್ಮಾಯಿ ಉಪಸ್ಥಿತರಿದ್ದರು.

ಮೆಗಾ ಡೈರಿಯ ವಿಶೇಷತೆ: ಮದ್ದೂರಿನ ಗೆಜ್ಜಲಗೆರೆಯಲ್ಲಿರುವ ಮನ್ಮುಲ್ ಮೆಗಾ ಡೈರಿ, 47 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಿದ್ದು, ಸುಮಾರು 260.9 ಕೋಟಿ ವೆಚ್ಚದ ಹಾಲು ಉತ್ಪಾದಕ ಘಟಕವಾಗಿದೆ. ಒಂದು ದಿನಕ್ಕೆ 30 ಮೆಟ್ರಿಕ್ ಟನ್ ಹಾಲಿನ ಪೌಡರ್, 4 ಮೆಟ್ರಿಕ್ ಟನ್ ಕೋವಾ, 2 ಮೆಟ್ರಿಕ್ ಟನ್ ಪನ್ನೀರ್, 12 ಮೆಟ್ರಿಕ್ ಟನ್ ತುಪ್ಪ, 10 ಮೆಟ್ರಿಕ್ ಟನ್ ಬೆಣ್ಣೆ, 10 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಈ ಮೆಗಾ ಡೈರಿಯಿಂದ ಒಂದು ವರ್ಷಕ್ಕೆ 6 ಕೋಟಿ ಹಣ ಉಳಿತಾಯವಾಗಲಿದೆ.

ಡೇರಿ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಆಗಮಿಸಿದ್ದರು. ಆದಿ ಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥಶ್ರೀ ಸಾನಿಧ್ಯ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸಚಿವ ಎಸ್.ಟಿ. ಸೋಮಶೇಖರ್ ಸೇರಿದಂತೆ ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್ ಮತ್ತಿತರರು ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


