ರಾಜ್ಯ

ಕಾಫಿನಾಡು ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆ, ದಕ್ಷಿಣ ಕನ್ನಡ ಗಡಿಭಾಗದಲ್ಲೂ ಮುಂದುವರಿದ ವರ್ಷಧಾರೆ

ಕೊಡಗು ಮತ್ತು ದಕ್ಷಿಣ ಕನ್ನಡ ಗಡಿಭಾಗ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ಭಾನುವಾರ ಕೂಡ ಸತತ ಮಳೆಯಾಗುತ್ತಿದೆ. ಆಷಾಢ ಮಳೆ ಕಾಫಿನಾಡು ಕೊಡಗಿನಲ್ಲಿ ಸತತವಾಗಿ ಸುರಿಯುತ್ತಿದ್ದು, ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪ್ರವಾಹದ ಭೀತಿ ಎದುರಾಗಿದೆ.

ಕಾಫಿನಾಡು ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಧಾರಾಕಾರ ಮಳೆ, ದಕ್ಷಿಣ ಕನ್ನಡ ಗಡಿಭಾಗದಲ್ಲೂ ಮುಂದುವರಿದ ವರ್ಷಧಾರೆ
ಸಕಲೇಶಪುರ ಸಮೀಪದ ಹೊಳೆ ಮಲ್ಲೇಶ್ವರ ದೇವಸ್ಥಾನ ಹೇಮಾವತಿ ನದಿ ನೀರಿನಲ್ಲಿ ಮುಳುಗಿದೆ
Published On :

ಮಡಿಕೇರಿ: ಕೊಡಗು ಮತ್ತು ದಕ್ಷಿಣ ಕನ್ನಡ ಗಡಿಭಾಗ ಸೇರಿದಂತೆ ಕೊಡಗು ಜಿಲ್ಲೆಯಾದ್ಯಂತ ಭಾನುವಾರ ಕೂಡ ಸತತ ಮಳೆಯಾಗುತ್ತಿದೆ. ಆಷಾಢ ಮಳೆ ಕಾಫಿನಾಡು ಕೊಡಗಿನಲ್ಲಿ ಸತತವಾಗಿ ಸುರಿಯುತ್ತಿದ್ದು, ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಪ್ರವಾಹದ ಭೀತಿ ಎದುರಾಗಿದೆ. 

ಹಾರಂಗಿ ಜಲಾಶಯವು ಭರ್ತಿಯಾಗುತ್ತಿರುವ ಹಿನ್ನಲೆಯಲ್ಲಿ ಶಾಸಕ ಎಂ. ಪಿ. ಅಪ್ಪಚ್ಚುರಂಜನ್ ಬಾಗಿನ ಅರ್ಪಿಸಿದ್ದಾರೆ. ಕೇವಲ ಮಳೆಯೊಂದೇ ಸುರಿಯುವುದಾಗಿದ್ದರೆ, ಜನರು ಅದಕ್ಕೆ ಹೆದರುತ್ತಿರಲಿಲ್ಲ. ಮಳೆಯ ಜೊತೆಗೆ ಭೂಮಿ ಕಂಪಿಸುತ್ತಿದೆ. 

2018ರ ನಂತರ ಕೊಡಗಿನ ಜನರಿಗೆ ಭಾರೀ ಮಳೆಯಾದರೆ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ಮಡಿಕೇರಿ ತಾಲೂಕಿನಲ್ಲೂ ಭಾರಿ ಮಳೆ ಮಳೆ ಬಿರುಸು ಪಡೆದುಕೊಳ್ಳುತ್ತಿದ್ದು, ಕಳೆದ ಒಂದು ದಿನದ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ 53.01 ಮಿ. ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ 779.73 ಮಿ. ಮೀ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 946.74 ಮಿ. ಮೀ ಮಳೆಯಾಗಿದೆ. ಮಡಿಕೇರಿ, ವಿರಾಜಪೇಟೆಯಲ್ಲಿ ಭಾರೀ ಮಳೆಯಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.