ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ತಿ ಮೌಲ್ಯ 87 ಕೋಟಿ ರೂ!
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಖಾನ್ ಅವರ ಆಸ್ತಿ ಸಂಪಾದನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹಠಾತ್ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ, ಶಾಸಕರು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ಬೆಂಗಳೂರು: ಮಾಜಿ ಸಚಿವ ಹಾಗೂ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಬಿ.ಝಡ್.ಜಮೀರ್ ಅಹಮದ್ ಖಾನ್ ಅವರ ಆಸ್ತಿ ಸಂಪಾದನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹಠಾತ್ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ (ACB), ಶಾಸಕರು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತನ್ನ ವರದಿಯಲ್ಲಿ ತಿಳಿಸಿದೆ. ಜಮೀರ್ ಖಾನ್ ಅವರ ಆಸ್ತಿ ಅಕ್ರಮ ಆಸ್ತಿಮೌಲ್ಯ 87 ಕೋಟಿಯ 44 ಲಕ್ಷದ 05 ಸಾವಿರದ 057 ಆಗಿದ್ದು ಅದು ಅವರ ಆದಾಯ ಮೂಲದ 2,031 ಪ್ರತಿಶತದಷ್ಟು ಹೆಚ್ಚಾಗಿದೆ.
ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹಮದ್ ಖಾನ್ ಗೆ ಎಸಿಬಿ ಶಾಕ್: ಮನೆ, ಕಚೇರಿ ಸೇರಿದಂತೆ ಹಲವೆಡೆ ಪರಿಶೀಲನೆ; ಬೆಂಬಲಿಗರ ಪ್ರತಿಭಟನೆ
ಜಾರಿ ನಿರ್ದೇಶನಾಲಯ(ED) ನೀಡಿದ ವರದಿ ಮತ್ತು ದಾಖಲೆಗಳ ಆಧಾರದ ಮೇಲೆ 85 ಸಿಬ್ಬಂದಿಯನ್ನು ಒಳಗೊಂಡ ಎಸಿಬಿಯ ಐದು ತಂಡಗಳು ಶಾಸಕರ ನಾಲ್ಕು ಆಸ್ತಿಗಳ ಮೇಲೆ ದಾಳಿ ನಡೆಸಿವೆ. ಶಾಸಕರ ವಿರುದ್ಧ ಎಸಿಬಿ ಅಕ್ರಮ ಆಸ್ತಿ ಪ್ರಕರಣ ದಾಖಲಿಸಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


