ಮೈಸೂರು: 'ಜತೆಗಿರುವನು ಚಂದಿರ' ನಾಟಕ ಪ್ರದರ್ಶನಕ್ಕೆ ಹಿಂದೂ ಕಾರ್ಯಕರ್ತರ ಅಡ್ಡಿ!
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯಬೇಕಿದ್ದ ಜತೆಗಿರುವನು ಚಂದಿರ ಎಂಬ ನಾಟಕ ಪ್ರದರ್ಶನಕ್ಕೆ ಬಜರಂಗದಳ ಕಾರ್ಯಕರ್ತರು ಅಡ್ಡಿ ಪಡಿಸಿದ್ದಾರೆ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯಬೇಕಿದ್ದ ಜತೆಗಿರುವನು ಚಂದಿರ ಎಂಬ ನಾಟಕ ಪ್ರದರ್ಶನಕ್ಕೆ ಬಜರಂಗದಳ ಕಾರ್ಯಕರ್ತರು ಅಡ್ಡಿ ಪಡಿಸಿದ್ದಾರೆ.
ಇತಿಹಾಸ ಪುನರಾವರ್ತನೆಯಾಗುತ್ತಿರುವಂತೆ ತೋರುತ್ತಿದೆ. ಆಗಿನ ಪ್ರಧಾನಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ಘೋಷಿಸಿದ ತುರ್ತು ಪರಿಸ್ಥಿತಿಯನ್ನು ಎಡ ಪಕ್ಷಗಳು ಮತ್ತು ಆರ್ ಎಸ್ ಎಸ್ ಸೇರಿದಂತೆ ಅನೇಕರು ಖಂಡಿಸಿದರು. ಆದರೆ ಈಗ ಆರೆಸ್ಸೆಸ್ ಸ್ನೇಹಿತರು ಅಧಿಕಾರದಲ್ಲಿದ್ದಾರೆ. ನಿಜವಾಗಿ ಹೇಳಬೇಕೆಂದರೆ ಅವರಿಗೆ ಕಾಂಗ್ರೆಸ್‌ಗಿಂತ ಹೆಚ್ಚಿನ ಶಕ್ತಿಯಿದೆ. ಹೀಗಿರುವಾಗ ಕಾಂಗ್ರೆಸ್ ತನ್ನ ಅಧಿಕಾರಾವಧಿಯಲ್ಲಿ ಮಾಡಿದ್ದಕ್ಕಿಂತ ಕೆಟ್ಟದಾಗಿ ನಡೆದುಕೊಳ್ಳುವುದು ಸರಿಯೇ? ಎಂದು ರಂಗಾಯಣ ಪ್ರಸನ್ನ ಖಂಡಿಸಿದ್ದಾರೆ.
ಭದ್ರಾವತಿಯಲ್ಲಿ ಬಟ್ಟೆ ಅಂಗಡಿಯನ್ನು ಧ್ವಂಸಗೊಳಿಸಿದ ಮತ್ತು ಇಬ್ಬರು ಮಾರಾಟಗಾರರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಆರು ಬಜರಂಗದಳ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಭಾನುವಾರ ಸಂಜೆ 5.48ರ ಸುಮಾರಿಗೆ ರಂಗಪ್ಪ ಸರ್ಕಲ್‌ನಲ್ಲಿರುವ ಅಂಗಡಿಗೆ ನುಗ್ಗಿದ ಆರೋಪಿಗಳು ಗ್ರಾಹಕರಿಗೆ ಬಟ್ಟೆ ಮಾರುತ್ತಿದ್ದಾಗ ಸೇಲ್ಸ್‌ಮ್ಯಾನ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ ಎಂದು ಶೌಕತ್ ಅಲಿ ಎಂಬವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಬಜರಂಗದಳ ಕಾರ್ಯಕರ್ತರು ಅಂಗಡಿಯ ಕಂಪ್ಯೂಟರ್, ಶೋಕೇಸ್ ಗ್ಲಾಸ್ ಹಾನಿಗೊಳಿಸಿದರು. ಇತ್ತೀಚೆಗೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಯನ್ನು ವಿರೋಧಿಸಿ ಹಿಂದೂ ಸಂಘಟನೆಗಳ ಕೆಲವು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಭದ್ರಾವತಿ ಹಳೆಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


