ರಾಜ್ಯ

ರಾಜ್ಯದಲ್ಲಿ ಮಳೆ ಆರ್ಭಟ: ನಾಳೆ ಜಿಲ್ಲಾಧಿಕಾರಿ, ಸಿಇಒಗಳ ಸಭೆ ಕರೆದ ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಮಹತ್ವದ ಸಭೆ ಕರೆದಿದ್ದಾರೆ.

ರಾಜ್ಯದಲ್ಲಿ ಮಳೆ ಆರ್ಭಟ: ನಾಳೆ ಜಿಲ್ಲಾಧಿಕಾರಿ, ಸಿಇಒಗಳ ಸಭೆ ಕರೆದ ಸಿಎಂ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಮಹತ್ವದ ಸಭೆ ಕರೆದಿದ್ದಾರೆ.

ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಮತ್ತು ಇತರೆ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದು, ಮಳೆಯಿಂದ ಹಾನಿಗೆ ಒಳಗಾಗಿರುವ ಪ್ರದೇಶಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಮತ್ತು ಅದರಿಂದ ಉಂಟಾಗಿರುವ ಹಾನಿ ಕುರಿತು ಮಾಹಿತಿ ಪಡೆಯಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಿದೆ? ಎಷ್ಟು ಹಾನಿಯಾಗಿದೆ? ಎಂಬುದರ ಕುರಿತು ಮಾಹಿತಿ ಪಡೆದು ಸೂಕ್ತ ನಿರ್ದೇಶನ ನೀಡಲಿದ್ದಾರೆ.

ಸಂಬಂಧಪಟ್ಟ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಈ ಮಳೆಹಾನಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.