ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದು ಗ್ರಾಮಸ್ಥರ ಸಾವು: ಪ್ರಕರಣದ ತನಿಖೆಗೆ ಲೋಕಾಯುಕ್ತ ಆದೇಶ
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಎರಡು ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು ಮಹಿಳೆ ಸಾವನ್ನಪ್ಪಿದ್ದು, 40 ಮಂದಿ ಅಸ್ವಸ್ಥಗೊಂಡಿರುವ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ನಂತರ ಘಟನೆ ಕುರಿತು...

ಬೆಂಗಳೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಎರಡು ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು ಮಹಿಳೆ ಸಾವನ್ನಪ್ಪಿದ್ದು, 40 ಮಂದಿ ಅಸ್ವಸ್ಥಗೊಂಡಿರುವ ಕುರಿತು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ನಂತರ ಘಟನೆ ಕುರಿತು ಸ್ವಯಂಪ್ರೇರಿತ ವಿಚಾರಣೆ ಆರಂಭಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು, ಈ ಬಗ್ಗೆ ತನಿಖೆ ನಡೆಸುವಂತೆ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ವಿಭಾಗಕ್ಕೆ ಆದೇಶಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಎಚ್ಎಂ ವೆಂಕಟೇಶ್ ಅವರು ಪ್ರಕರಣಕ್ಕೆ ಸಂಬಂಧಿಸಿದ ಮಾಧ್ಯಮ ವರದಿಯನ್ನು ಲಗತ್ತಿಸಿ, ಘಟನೆ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಲೋಕಾಯುಕ್ತರಿಗೆ ಇಮೇಲ್ ಮಾಡಿದ್ದರು. . ಈ ಇ-ಮೇಲ್ ಸ್ವೀಕರಿಸಿದ ನಂತರ ಲೋಕಾಯುಕ್ತ ಪಾಟೀಲ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ.
ಕಲುಷಿತ ನೀರು ಸೇವಿಸಿ ಇದುವರೆಗೆ 8 ಜನರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮ ವರದಿಯಲ್ಲಿ ಹೇಳಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಮಾಧ್ಯಮಗಳ ವರದಿ ಪ್ರಕಾರ, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ, ನೀರು ಶುದ್ಧೀಕರಣ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ. ಇದರ ಪರಿಣಾಮವಾಗಿ ತುಂಗಭದ್ರಾ ನದಿ ನೀರನ್ನು ಶುದ್ಧೀಕರಿಸದೆ ಸರಬರಾಜು ಮಾಡಿರುವುದು ಜನರ ಆರೋಗ್ಯ ಹದಗೆಡಲು ಪ್ರಮುಖ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


