ಕವಿ ಸರ್ವಜ್ಞ ಹುಟ್ಟೂರಿನ ಮನೆ, ಸಮಾಧಿ ಸ್ಥಳ ಅಭಿವೃದ್ಧಿಗೆ ಸರ್ಕಾರದ ಅನುಮೋದನೆ
ಕವಿ ಸರ್ವಜ್ಞನ ಹುಟ್ಟೂರಾದ ಹಾವೇರಿ ಜಿಲ್ಲೆಯ ಅಬಲೂರಿನಲ್ಲಿ ಅವರ ತಂದೆ ತಾಯಿಯ ಹೆಸರಿನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮಾಸೂರಿನ ಸಮಾಧಿ ಸ್ಥಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅನುಮೋದನೆ ನೀಡಿದೆ.

ಬೆಂಗಳೂರು: ಕವಿ ಸರ್ವಜ್ಞನ ಹುಟ್ಟೂರಾದ ಹಾವೇರಿ ಜಿಲ್ಲೆಯ ಅಬಲೂರಿನಲ್ಲಿ ಅವರ ತಂದೆ ತಾಯಿಯ ಹೆಸರಿನಲ್ಲಿ ಕಟ್ಟಡ ನಿರ್ಮಾಣ ಹಾಗೂ ಮಾಸೂರಿನ ಸಮಾಧಿ ಸ್ಥಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅನುಮೋದನೆ ನೀಡಿದೆ.
ಇದರ ಜೊತೆಗೆ ಹಿರೇಕೆರೂರು ಪಟ್ಟಣದಲ್ಲಿ ಅಧ್ಯಯನ ಕೇಂದ್ರ ಸ್ಥಾಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಬಲೂರಿನಲ್ಲಿ ಅವರು ವಾಸವಿದ್ದ ಮನೆಯ ಸ್ಥಳ ಹಾಗೂ ಮಾಸೂರಿನ ಸಮಾಧಿ ಸ್ಥಳ ಅಭಿವೃದ್ಧಿಗೆ ಅಗತ್ಯವಿರುವ ಖಾಸಗಿ ಜಮೀನು ಖರೀದಿಸಲು ಒಪ್ಪಿಗೆ ನೀಡಲಾಯಿತು.
ಇದರೊಂದಿಗೆ ಸರ್ವಜ್ಞ ಪ್ರಾಧಿಕಾರದಿಂದ 25 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು. ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಮುಖಾಂತರ ಕೈಗೊಳ್ಳುವಂತೆ ಸೂಚಿಸಿದರು. ಇದರೊಂದಿಗೆ ಸರ್ವಜ್ಞರ ನೆನಪಿಗೆ ರೂಪಿಸುವ ಯೋಜನೆಗಳನ್ನು ಅರ್ಥಪೂರ್ಣವಾಗಿ ಹಾಗೂ ಆಯಾ ವಿಷಯಗಳ ಪರಿಣತರೊಂದಿಗೆ ಸಮಾಲೋಚನೆ ನಡೆಸಿ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಶಿಥಿಲಾವಸ್ಥೆಯಲ್ಲಿದ್ದ ಸವಣೂರು ನವಾಬರ ಅರಮನೆ ಪುನರುಜ್ಜೀವನ ಕಾರ್ಯ ಪೂರ್ಣಗೊಂಡಿದ್ದು, ಇಲ್ಲಿ ಸ್ಥಳೀಯ ಇತಿಹಾಸವನ್ನು ನೆನಪಿಸುವ ವಸ್ತುಸಂಗ್ರಹಾಲಯ ಸ್ಥಾಪಿಸಲು ಮುಖ್ಯಮಂತ್ರಿಗಳು ಸೂಚಿಸಿದರು.ಆರು ತಿಂಗಳಲ್ಲಿ ವಸ್ತು ಸಂಗ್ರಹಾಲಯದ ಕೆಲಸ ಪೂರ್ಣಗೊಳಿಸುವಂತೆ ತಿಳಿಸಿದರು.
ಬಸವಣ್ಣನವರ ಐಕ್ಯಸ್ಥಳವಾಗಿರುವ ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮವು ಜನಾಕರ್ಷಣೆಯ ಕೇಂದ್ರವಾಗುವ ಜತೆಗೆ ಬಸವ ತತ್ವದ ಅರಿವು ಮೂಡಿಸುವ ತಾಣವೂ ಆಗಬೇಕು. ಇದಕ್ಕೆ ಪೂರಕವಾಗಿ ಸಂಗಮವನ್ನು ಅಭಿವೃದ್ಧಿ ಪಡಿಸಿ ಎಂದು ಸಿಎಂ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


