ರಾಜ್ಯ

ರಾಜ್ಯದಲ್ಲಿ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 927 ಸೇರಿ ರಾಜ್ಯದಲ್ಲಿ 989 ಹೊಸ ಕೇಸ್ ಪತ್ತೆ, ಶೂನ್ಯ ಸಾವು!

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 989 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,78,079ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 927 ಸೇರಿ ರಾಜ್ಯದಲ್ಲಿ 989 ಹೊಸ ಕೇಸ್ ಪತ್ತೆ, ಶೂನ್ಯ ಸಾವು!
ಕೋವಿಡ್-19 ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 989 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು  ಸೋಂಕಿತರ ಸಂಖ್ಯೆ 39,78,079ಕ್ಕೆ ಏರಿಕೆಯಾಗಿದೆ.

802 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 6,693 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 927 ಹೊಸ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 18,12,065ಕ್ಕೆ ಏರಿಕೆಯಾಗಿದೆ. 6,239 ಸಕ್ರಿಯ ಪ್ರಕರಣಗಳಿವೆ. ಇಂದು ರಾಜ್ಯದಲ್ಲಿ ಕೊರೋನಾದಿಂದ ಯಾರೂ ಮೃತಪಟ್ಟಿಲ್ಲ.

ಇಂದು 27,535 ಕೊರೋನಾ ಪರೀಕ್ಷೆ ನಡೆಸಲಾಗಿದೆ.  ಸೋಂಕಿನ ಪ್ರಮಾಣ ಶೇ. 3.59%ರಷ್ಟಿದ್ದು, ಮರಣ ಪ್ರಮಾಣ 0.00ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.