ಭಾರೀ ಮಳೆ: ರಾಜ್ಯದ ಐದು ಜಿಲ್ಲೆಗಳಲ್ಲಿ ಆರೆಂಜ್, ಆರು ಜಿಲ್ಲೆಗಳಲ್ಲಿ 'ಯೆಲ್ಲೋ' ಆಲರ್ಟ್ ಘೋಷಣೆ
ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ 6 ಜಿಲ್ಲೆಗಳಲ್ಲಿ 'ಯೆಲ್ಲೋ' ಆಲರ್ಟ್ ಘೋಷಿಸಿದೆ.

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಆರೆಂಜ್ ಹಾಗೂ 6 ಜಿಲ್ಲೆಗಳಲ್ಲಿ 'ಯೆಲ್ಲೋ' ಆಲರ್ಟ್ ಘೋಷಿಸಿದೆ.
ಧಾರವಾಡ, ಹಾವೇರಿ, ಕಲಬುರಗಿ, ಬೆಳಗಾವಿ, ಬೀದರ್ ಸೇರಿದಂತೆ ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಇನ್ನೂ ಯಾದಗಿರಿ, ವಿಜಯಪುರ, ಬಾಗಲಕೋಟೆ, ಶಿವಮೊಗ್ಗ, ದಾವಣಗೆರೆ, ಮೈಸೂರು ಸೇರಿದಂತೆ ಆರು ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಜಿಲ್ಲೆಗಳಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈಗಾಗಲೇ ರೆಡ್ ಆಲರ್ಟ್ ಘೋಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


