ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಭಾನುವಾರ ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದೆ. ತಾಲೂಕಿನ ಸಂಪಾಜೆ ಮತ್ತು ಸಮೀಪದ ಅರಂತೋಡು, ತೊಡಿಕಾನ, ಚೆಂಬು ಮತ್ತು ಕಲ್ಲಪಲ್ಲಿ ನಿವಾಸಿಗಳು ಬೆಳಗ್ಗೆ 6.23ಕ್ಕೆ ಕಂಪಿಸಿದ ಅನುಭವವಾಗಿದೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಭಾನುವಾರ ಮುಂಜಾನೆ ಭೂಮಿ ಕಂಪಿಸಿದ ಅನುಭವವಾಗಿದೆ. ತಾಲೂಕಿನ ಸಂಪಾಜೆ ಮತ್ತು ಸಮೀಪದ ಅರಂತೋಡು, ತೊಡಿಕಾನ, ಚೆಂಬು ಮತ್ತು ಕಲ್ಲಪಲ್ಲಿ ನಿವಾಸಿಗಳು ಬೆಳಗ್ಗೆ 6.23ಕ್ಕೆ ಕಂಪಿಸಿದ ಅನುಭವವಾಗಿದೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.
ಸಾಮಾಜಿಕ ಜಾಲತಾಣಗಳಲ್ಲೂ ಕಂಪನದ ಪೋಸ್ಟ್‌ಗಳು ಕಾಣಿಸಿಕೊಂಡಿವೆ. ಭಾರಿ ಶಬ್ಧದ ಜತೆಗೆ ಕೆಲಕಾಲ ಭೂಮಿ ಕಂಪಿಸಿತು ಎಂದು ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಕೆ.ಹಮೀದ್ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕಂಪನಗಳು ಹೆಚ್ಚು ತೀವ್ರವಾಗಿವೆ ಎಂದು ಅವರು ಹೇಳಿದರು.
ಒಂದು ವಾರಕ್ಕೂ ಹೆಚ್ಚು ಸಮಯದ ನಂತರ ಈ ಪ್ರದೇಶದಲ್ಲಿ ಮತ್ತೆ ಭೂ ಕಂಪಸಿದ ಅನುಭವಾಗಿದೆ. ಜೂನ್ 25 ರಿಂದ ಜುಲೈ 1 ರ ನಡುವೆ ಸುಳ್ಯ ಮತ್ತು ನೆರೆಯ ಕೊಡಗು ಜಿಲ್ಲೆಯ ಹಲವಾರು ಸ್ಥಳಗಳಲ್ಲಿ ಲಘು ಭೂಕಂಪಗಳು ಹಲವಾರು ಬಾರಿ ಸಂಭವಿಸಿವೆ. ಭಾನುವಾರದ ಕಂಪನದ ಕುರಿತು ಕರ್ನಾಟಕ ರಾಜ್ಯ ರಾಷ್ಟ್ರೀಯ ವಿಪತ್ತು ನಿಗಾ ಕೇಂದ್ರದ ವರದಿಯನ್ನು ನಿರೀಕ್ಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


