ರಾಜ್ಯ

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 832 ಸೇರಿ ರಾಜ್ಯದಲ್ಲಿ 891 ಹೊಸ ಪ್ರಕರಣ ಪತ್ತೆ, ಒಬ್ಬರು ಸಾವು

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 891 ಹೊಸ ಪ್ರಕರಣ ದೃಢಪಟ್ಟಿದೆ. 1,189 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಮನೆಗೆ ವಾಪಸ್ಸಾಗಿದ್ದಾರೆ.

ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 832 ಸೇರಿ ರಾಜ್ಯದಲ್ಲಿ 891 ಹೊಸ ಪ್ರಕರಣ ಪತ್ತೆ, ಒಬ್ಬರು ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 891 ಹೊಸ ಪ್ರಕರಣ ದೃಢಪಟ್ಟಿದೆ. 1,189 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಮನೆಗೆ ವಾಪಸ್ಸಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,80,585ಕ್ಕೆ ಏರಿಕೆಯಾಗಿದೆ. 1,189 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಮನೆಗೆ ವಾಪಸ್ಸಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಸದ್ಯ 6, 419 ಸಕ್ರಿಯ ಪ್ರಕರಣಗಳಿದ್ದು, ಸೋಂಕಿನ ಪ್ರಮಾಣ ಶೇ. 4.51 ರಷ್ಟಿದೆ.  ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದಾರೆ.  ಬೆಂಗಳೂರಿನಲ್ಲಿ 832 ಪ್ರಕರಣಗಳು ಪತ್ತೆಯಾಗಿದ್ದು, 1,101 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಗರದಲ್ಲಿ ಸದ್ಯ 5,987 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟರ್ ನಲ್ಲಿ ತಿಳಿಸಿದ್ದಾರೆ. 

ರಾಜ್ಯದಲ್ಲಿ ಇಂದು 19, 738 ಟೆಸ್ಟ್ ಮಾಡಲಾಗಿದೆ. ಇದರೊಂದಿಗೆ ಇಲ್ಲಿಯವರೆಗೂ ಒಟ್ಟಾರೇ 67, 26,9052 ಟೆಸ್ಟ್ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.