ನಟ ದಿವಂಗತ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ; ಆಗಸ್ಟ್ 5ರಿಂದ ಆರಂಭ
ಬೆಂಗಳೂರಿನ ಪ್ರಖ್ಯಾತ ಲಾಲ್‍ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆಗಸ್ಟ್ 5 ರಿಂದ 15 ರವರೆಗೆ ನಡೆಯಲಿದ್ದು, ಆಗಸ್ಟ್ 5ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರಿನ ಪ್ರಖ್ಯಾತ ಲಾಲ್‍ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ (Lalbagh Independence day flower show) ಆಗಸ್ಟ್ 5 ರಿಂದ 15 ರವರೆಗೆ ನಡೆಯಲಿದ್ದು, ಆಗಸ್ಟ್ 5ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದ್ದಾರೆ.
ವಿಕಾಸಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಪುಷ್ಪ ಪ್ರದರ್ಶನ ಡೆಯಲಿದೆ. ಆಗಸ್ಟ್ 15ರ ಬಳಿಕ ಒಂದೆರಡು ದಿನಗಳ ಕಾಲ ಮುಂದುವರಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಬಾರಿಯ ಪುಷ್ಪ ಪ್ರದರ್ಶನಕ್ಕೆ ನಟ ದಿ.ಪುನೀತ್ ರಾಜ್ ಕುಮಾರ್ (Puneet Rajkumar) ಹೆಸರಿನ್ನಿಡಲಾಗುತ್ತಿದೆ. ಪುನೀತ್ ಹೆಸರಿನಲ್ಲಿ ನಡೆಯುತ್ತಿರುವ ಈ ಬಾರಿಯ ಫ್ಲವರ್ ಶೋಗೆ ವಿದೇಶಗಳಿಂದಲೂ ಹೂವುಗಳನ್ನು ತರಿಸಲಾಗಿದೆ ಎಂದರು.
ಪ್ರದರ್ಶನದ ವಿಶೇಷ: ಈ ಬಾರಿ ಫಲಪುಷ್ಪ ಪ್ರದರ್ಶನದಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ಗಾಜನೂರಿನ ಮನೆ ವಿಶೇಷವಾಗಿದೆ. ಕಳೆದ ಎರಡು ವರ್ಷ ಲಾಲ್‍ಬಾಗ್ ಫ್ಲವರ್ ಶೋ ಕೋವಿಡ್‍ನಿಂದ ಮಾಡಿರಲಿಲ್ಲ. ಆದರೆ ಈ ಬಾರಿ ಆಗಸ್ಟ್ 15ರಂದು ಹಿಂದೆ ಮಾಡುತ್ತಿದ್ದಕ್ಕಿಂತ ಹೆಚ್ಚಾಗಿ ಮಾಡುತ್ತಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿ ಮಳೆಯಿಂದ ತೋಟಗಾರಿಕೆ ಬೆಳೆಯಲ್ಲಿ ಆಗಿರುವ ನಷ್ಟದ ಬಗ್ಗೆ ಮಾತನಾಡಿದ ಸಚಿವರು, ಸಂಪೂರ್ಣ ವರದಿ ಅಧಿಕಾರಿಗಳು ತರಿಸುತ್ತಿದ್ದಾರೆ. ವರದಿ ಬಳಿಕ ರೈತರಿಗೆ ಮಾಡಬೇಕಿರುವ ಸಹಾಯವನ್ನು ಮಾಡುತ್ತೇವೆ. ಪ್ರಾಮಾಣಿಕವಾಗಿ ನಾವು ರೈತರ ಜತೆಗೆ ನಿಲ್ಲುತ್ತೇವೆ ಎಂದು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


