ವಿಜಯಪುರ: ಇಬ್ಬರೂ ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ!
ತಾಯಿಯೊಬ್ಬಳು ತಮ್ಮ ಪುಟ್ಟ ಮಕ್ಕಳನ್ನು ನಿರ್ದಯವಾಗಿ ಬಾವಿಗೆ ತಳ್ಳಿ ನಂತರ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ: ತಾಯಿಯೊಬ್ಬಳು ತಮ್ಮ ಪುಟ್ಟ ಮಕ್ಕಳನ್ನು ನಿರ್ದಯವಾಗಿ ಬಾವಿಗೆ ತಳ್ಳಿ ನಂತರ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ.
ಸಿಂದಗಿ ತಾಲೂಕಿನ ಹಂದಿನಗೂರಿನಲ್ಲಿ ಈ ಘಟನೆ ನಡೆದಿದೆ. ಮೂರು ವರ್ಷದ ಹಾಗೂ ಒಂದು ವರ್ಷದ ಹೆಣ್ಣು ಮಗುವನ್ನು ಬಾವಿಗೆ ತಳ್ಳಿದ ನಂತರ 32 ವರ್ಷದ ಅವ್ವಮ್ಮಾ ಶ್ರೀಶೈಲ ಗುಬ್ಬೇವಾಡ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾಲ್ವರು ಹೆಣ್ಣುಮಕ್ಕಳ ಪೈಕಿ ಇಬ್ಬರನ್ನು ಬಾವಿಗೆ ತಳ್ಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ 6 ತಿಂಗಳಿನಿಂದ ಅವ್ವಮ್ಮಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ.
ಪತಿ ಶ್ರೀಶೈಲ ಗುಬ್ಬೇವಾಡ ಕುರಿ ಕಾಯಲು ತೆರಳಿದ್ದಾಗ ಅವ್ವಮ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾವಿಯಿಂದ ಮೂವರ ಮೃತದೇಹವನ್ನು ಗ್ರಾಮಸ್ಥರು ಹೊರತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಸಿಂದಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


