ನಾಲ್ವರು ಪೊಲೀಸ್ ಅಧೀಕ್ಷಕರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ!
ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ಮೈಸೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆಗೊಳಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ಮೈಸೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆಗೊಳಿಸಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಲೋಕಾಯುಕ್ತದಲ್ಲಿ ಪೊಲೀಸ್ ಅಧೀಕ್ಷಕರಾಗಿದ್ದ ಎಂ ಎಲ್ ಪುರುಷೋತ್ತಮ್ ಅವರನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ವರ್ಗಾವಣೆಗೊಳಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ಲಕ್ಷ್ಮೀ ಗಣೇಶ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ಪೊಲೀಸ್ ಅಧೀಕ್ಷಕರನ್ನಾಗಿ ಟ್ರಾನ್ಸಫರ್ ಮಾಡಲಾಗಿದೆ.
ಹಾಸನ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ಬಿ.ಎನ್.ನಂದಿನಿ ಅವರನ್ನು ಮೈಸೂರು ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಮೈಸೂರು ಜಿಲ್ಲೆಯ ಹೆಚ್ಚು ಪೊಲೀಸ್ ಅಧೀಕ್ಷಕರಾಗಿದ್ದ ಆರ್.ಶಿವಕುಮಾರ್ ಅವರನ್ನು ರಾಯಚೂರು ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಮತ್ತೊಂದೆಡೆ ಈ ಮೇಲ್ಕಂಡ ವರ್ಗಾವಣೆ ಆದೇಶದಿಂದಾಗಿ ಸ್ಥಳ ನಿರೀಕ್ಷೆಯಲ್ಲಿರುವ ಇ.ಎಸ್.ವೀರಭದ್ರಯ್ಯ ಎಸ್ ಪಿ (ನಾನ್ ಐಪಿಎಸ್) ರವರು ಮುಂದಿನ ಸ್ಥಳ ನಿಯುಕ್ತಿಗಾಗಿ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಸರಕಾರದ ಆದೇಶದಲ್ಲಿ ತಿಳಿಸಲಾಗಿದೆ. ಈ ಮೇಲ್ಕಂಡ ಎಲ್ಲ ಅಧಿಕಾರಿಗಳನ್ನು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆಯಿಂದ ಕೂಡಲೇ ಬಿಡುಗಡೆಗೊಳಿಸಿ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಲ್ಲಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲು ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


