ಕಡಲ್ಕೊರೆತ ತಡೆಗೆ ಹೊಸ ಶಾಶ್ವತ ತಂತ್ರಜ್ಞಾನ, ಭೂಕುಸಿತ-ಭೂಕಂಪನ ಬಗ್ಗೆ ನಾಲ್ಕು ಸಂಸ್ಥೆಗಳಿಂದ ಅಧ್ಯಯನ: ಸಿಎಂ ಬೊಮ್ಮಾಯಿ
ಕೊಡಗು ಮತ್ತು ಕರಾವಳಿ ಜಿಲ್ಲೆಯಲ್ಲಿ ಅವ್ಯಾಹತ ಮಳೆಯಿಂದ ಪ್ರವಾಹ ಉಂಟಾಗಿ ಭೂಕುಸಿತವಾಗಿದ್ದು ಮತ್ತು ಅದರ ಜೊತೆಗೆ ಭೂಕಂಪವಾಗಿರುವ ಘಟನೆಗಳಿಗೆ ಸಂಬಂಧಿಸಿದಂತೆ ನಾಲ್ಕು ಸಂಸ್ಥೆಗಳಿಂದ ಅಧ್ಯಯನ ನಡೆಸಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಉಡುಪಿ: ಕೊಡಗು ಮತ್ತು ಕರಾವಳಿ ಜಿಲ್ಲೆಯಲ್ಲಿ ಅವ್ಯಾಹತ ಮಳೆಯಿಂದ ಪ್ರವಾಹ ಉಂಟಾಗಿ ಭೂಕುಸಿತವಾಗಿದ್ದು ಮತ್ತು ಅದರ ಜೊತೆಗೆ ಭೂಕಂಪವಾಗಿರುವ ಘಟನೆಗಳಿಗೆ ಸಂಬಂಧಿಸಿದಂತೆ ನಾಲ್ಕು ಸಂಸ್ಥೆಗಳಿಂದ ಅಧ್ಯಯನ ನಡೆಸಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರಾವಳಿಯ ಮಂಗಳೂರು, ಉಡುಪಿಯ ಸಮುದ್ರ ಕಿನಾರೆಗಳಲ್ಲಿ ಕಡಲ್ಕೊರೆತ ತಡೆಗೆ ಹೊಸ ತಂತ್ರಜ್ಞಾನ ಅಳವಡಿಸುವ ಬಗ್ಗೆ ತೀರ್ಮಾನ ಮಾಡಿದ್ದೇವೆ. ಇಂದು ಉಡುಪಿಯಲ್ಲಿ ಮೂರು ಜಿಲ್ಲೆಗಳ ಅಧಿಕಾರಿಗಳ ಸಭೆ ನಡೆಸಿ ತುರ್ತಾಗಿ ಹಾಗೂ ದೀರ್ಘಕಾಲೀನವಾಗಿ ಮಾಡಬೇಕಾಗಿರುವ ಕೆಲಸಗಳ ಕುರಿತು ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.
ಕಾಪು, ಮರವಂತೆ, ಮೂಲ್ಕಿಗಳಿಗೆ ಭೇಟಿ ನೀಡಿ ಇಲ್ಲಿಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿ, ಹಣಕಾಸು ವ್ಯವಸ್ಥೆಯನ್ನು ಮಾಡಿ ಬೆಂಗಳೂರಿಗೆ ಹಿಂತಿರುಗುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಹೊಸ ತಂತ್ರಜ್ಞಾನದ ಮೂಲಕ ಕಡಲ್ಕೊರೆತ ನಿಯಂತ್ರಣಕ್ಕೆ ತೀರ್ಮಾನಿಸಲಾಗಿದೆ ಎಂದರು. ನಿನ್ನೆ ಸಮುದ್ರ ಕಿನಾರೆಯಲ್ಲಿ ಪರಿಶೀಲನೆ ನಡೆಸಿದ್ದ ಸಿಎಂ ಬೊಮ್ಮಾಯಿ ಕಡಲ್ಕೊರೆತ ತಡೆಗೆ ಹೊಸ ವಿಧಾನದಲ್ಲಿ ಸೀ ವೇವ್ ಬ್ರೇಕರ್ ತಂತ್ರಜ್ಞಾನ ಬಳಸಿ ಶಾಶ್ವತ ಕಾಮಗಾರಿ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


