ರಾಜ್ಯ

ಬೆಳಗಾವಿ: ಬೈಲಹೊಂಗಲದಲ್ಲಿ ಹಿರಿಯ ನಟ ಶಿವರಂಜನ್ ಮೇಲೆ ಶೂಟೌಟ್; ಪ್ರಾಣಾಪಾಯದಿಂದ ಪಾರು

ಕನ್ನಡ ಚಿತ್ರರಂಗದ ಹಿರಿಯ ನಟ, ಉದ್ಯಮಿ ಶಿವರಂಜನ್ ಬೋಳಣ್ಣವರ ಮೇಲೆ ಗುಂಡಿನ ದಾಳಿ ಯತ್ನ ನಡೆದಿದೆ. ಬೆಳಗಾವಿಯ ಬೈಲಹೊಂಗಲ ಪಟ್ಟಣದಲ್ಲಿರುವ ಶಿವರಂಜನ್ ಬೋಳಣ್ಣವರ್ ಮನೆ ಎದುರು ನಿನ್ನೆ ರಾತ್ರಿ 7.54ರ ಸುಮಾರಿಗೆ ಬಂದಿದ್ದ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಶಿವರಂಜನ್ ಪಾರಾಗಿದ್ದಾರೆ.

ಬೆಳಗಾವಿ: ಬೈಲಹೊಂಗಲದಲ್ಲಿ ಹಿರಿಯ ನಟ ಶಿವರಂಜನ್ ಮೇಲೆ ಶೂಟೌಟ್; ಪ್ರಾಣಾಪಾಯದಿಂದ ಪಾರು
ಹಿರಿಯ ನಟ ಶಿವರಂಜನ್ (ಸಂಗ್ರಹ ಚಿತ್ರ)
Published On :

ಬೆಳಗಾವಿ: ಕನ್ನಡ ಚಿತ್ರರಂಗದ ಹಿರಿಯ ನಟ, ಉದ್ಯಮಿ ಶಿವರಂಜನ್ ಬೋಳಣ್ಣವರ (Senior actor Shivaranjan) ಮೇಲೆ ಗುಂಡಿನ ದಾಳಿ ಯತ್ನ ನಡೆದಿದೆ. ಬೆಳಗಾವಿಯ ಬೈಲಹೊಂಗಲ ಪಟ್ಟಣದಲ್ಲಿರುವ ಶಿವರಂಜನ್ ಬೋಳಣ್ಣವರ್ ಮನೆ ಎದುರು ನಿನ್ನೆ ರಾತ್ರಿ 7.54ರ ಸುಮಾರಿಗೆ ಬಂದಿದ್ದ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಶಿವರಂಜನ್ ಪಾರಾಗಿದ್ದಾರೆ.

ಬೈಲಹೊಂಗಲದ ಹಳೆಯ ಹನುಮಂತ ದೇವರ ದೇವಸ್ಥಾನ ಬಳಿ ಶಿವರಂಜನ್ ಅವರ ಮನೆ ಇದ್ದು, ಶಿವರಂಜನ್ ಸೋದರ ಸಂಬಂಧಿಯಿಂದಲೇ ಗುಂಡಿನ ದಾಳಿ  ನಡೆದಿದೆ ಎನ್ನಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಎಸ್‌ಪಿ ಡಾ.ಸಂಜೀವ ಪಾಟೀಲ್ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ.

ಶಿವರಂಜನ್‌ ಅವರು ನಟಿ ಶ್ರುತಿ ಅವರೊಂದಿಗೆ ಅಮೃತ ಸಿಂಧು, ರಾಘವೇಂದ್ರ ರಾಜಕುಮಾರ್‌ ಅವರೊಂದಿಗೆ ಆಟ ಹುಡುಗಾಟ ಸೇರಿದಂತೆ ವೀರಭದ್ರ, ಸತ್ಯ ಸಂದೇಶ, ಬನ್ನಿ ಒಂದ್ಸಲ ನೋಡಿ,  ಬಿಸಿರಕ್ತ, ಕನಸೆಂಬ ಕುದುರೆಯನೇರಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.