ಉಡುಪಿ: ಸುಟ್ಟು ಕರಕಲಾದ ಕಾರಿನಲ್ಲಿ ಸಂಪೂರ್ಣ ಸುಟ್ಟುಹೋದ ಶವ ಪತ್ತೆ!
ಸುಟ್ಟು ಕರಕಲಾದ ಕಾರಿನಲ್ಲಿ ಸಂಪೂರ್ಣ ಸುಟ್ಟುಹೋದ ಶವವೊಂದು ಉಡುಪಿ ಜಿಲ್ಲೆಯ ಬೈಂದೂರಿನ ಹೆನುಬೇರು ಬಳಿ ನಿನ್ನೆ ಬುಧವಾರ ಪತ್ತೆಯಾಗಿದೆ.

ಉಡುಪಿ: ಸುಟ್ಟು ಕರಕಲಾದ ಕಾರಿನಲ್ಲಿ ಸಂಪೂರ್ಣ ಸುಟ್ಟುಹೋದ ಶವವೊಂದು ಉಡುಪಿ ಜಿಲ್ಲೆಯ ಬೈಂದೂರಿನ ಹೆನುಬೇರು ಬಳಿ ನಿನ್ನೆ ಬುಧವಾರ ಪತ್ತೆಯಾಗಿದೆ. ಕಾರಿನ ಹಿಂಬದಿ ಸೀಟಿನಲ್ಲಿ ಗುರುತು ಸಿಗದಷ್ಟು ಸುಟ್ಟು ಕರಕಲಾದ ಮೃತದೇಹ ಸಿಕ್ಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತದೇಹ ಪುರುಷನದ್ದೋ ಅಥವಾ ಮಹಿಳೆಯದ್ದೋ ಎಂದು ಇನ್ನೂ ಗುರುತಿಸಲಾಗಿಲ್ಲ. ಚಾಲಕನ ಸೀಟಿನ ಹಿಂದೆ ಶವ ಪತ್ತೆಯಾಗಿದೆ.
ಮೇಲ್ನೋಟಕ್ಕೆ ಇದೊಂದು ಕೊಲೆ ಪ್ರಕರಣ ಎಂದು ಕಂಡುಬರುತ್ತಿದೆ. ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಈ ನಡುವೆ ಬೈಂದೂರು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಮಾರ್ಗದಲ್ಲಿ ಯಾರು ಪ್ರಯಾಣಿಸಿದ್ದಾರೆ ಎಂದು ಮಾಹಿತಿ ಕಲೆಹಾಕುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


