ಪಿಎಸ್ಐ ನೇಮಕಾತಿ ಹಗರಣದ ನ್ಯಾಯಯುತ ತನಿಖೆಯನ್ನು ನಾವು ನಿರೀಕ್ಷಿಸಬಹುದೇ?: ಕರ್ನಾಟಕ ಹೈಕೋರ್ಟ್ ಪ್ರಶ್ನೆ
ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ, ಇದು ಕೊಲೆಗಿಂತ ಗಂಭೀರವಾದ ಅಪರಾಧ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ, ಇದು ಕೊಲೆಗಿಂತ ಗಂಭೀರವಾದ ಅಪರಾಧ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಪ್ರಕರಣದ ತನಿಖೆ ನಡೆಸುತ್ತಿರುವಅಧಿಕಾರಿಗಳಿಂದ ನ್ಯಾಯಯುತ ತನಿಖೆಯನ್ನು ಹೇಗೆ ನಿರೀಕ್ಷಿಸಬಹುದು? ಎಡಿಜಿಪಿ ಅಮೃತ್ ಪಾಲ್ ಅವರಿಗಿಂತ ಕೆಳಗಿರುವವರು ಉನ್ನತ ಅಧಿಕಾರಿಗೆ ಹೆದರುವುದಿಲ್ಲವೇ? ಎಂಬ ಪ್ರಶ್ನೆ ಮುಂದಿಟ್ಟಿದೆ.
ಅಕ್ರಮ ನೇಮಕಾತಿ ಸಮಾಜಕ್ಕೇ ಬಹು ದೊಡ್ಡ ಬೆದರಿಕೆಯಾಗಿದೆ. ಪ್ರತಿ ನೇಮಕದಲ್ಲೂ ಹೀಗೇ ಆದರೆ ಕೋರ್ಟ್ ಕಣ್ಮುಚ್ಚಿ ಕೂರಬೇಕೇ ಎಂದು ನ್ಯಾ.ಹೆಚ್.ಪಿ.ಸಂದೇಶ್ ಅಸಮಾಧಾನವ್ಯಕ್ತಪಡಿಸಿದ್ದಾರೆ.
ಜು.20 ಕ್ಕೆ ತನಿಖಾ ಪ್ರಗತಿ ವಿವರ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ, ಪಿಎಸ್ಐ ಅಭ್ಯರ್ಥಿಗಳು ವಿಸಿ ಮೂಲಕ ಮನವಿ ಸಲ್ಲಿಸಲು ಮುಂದಾಗಿದ್ದಾರೆ, ಅರ್ಜಿ ಸಲ್ಲಿಸದೇ ವಿಸಿ ಮೂಲಕ ವಾದಮಂಡನೆ ಮಾಡುವಂತಿಲ್ಲ, ಅಭ್ಯರ್ಥಿಗಳ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಹಗರಣ: ಎಡಿಜಿಪಿ ಅಮೃತ್ ಪೌಲ್ ರನ್ನು ಮಂಪರು ಪರೀಕ್ಷೆಗೆ ಒಳಪಡಿಸುವಂತೆ ಸಿದ್ದರಾಮಯ್ಯ ಆಗ್ರಹ
ಆಡಳಿತದ ಚುಕ್ಕಾಣಿ ಹಿಡಿದಿದ್ದ ಎಡಿಜಿಪಿ ತಮ್ಮ ಸುಪರ್ದಿಯಲ್ಲಿದ್ದ ಉತ್ತರ ಪತ್ರಿಕೆಗಳನ್ನು ತಿದ್ದುವ ಕಾರ್ಯದಲ್ಲಿ ತೊಡಗಿದ್ದರು. ತನ್ನ ಶ್ರೇಣಿಗಿಂತ ಕೆಳಗಿನ ಅಧಿಕಾರಿಗಳ ಕೈಯಲ್ಲಿ ನ್ಯಾಯಯುತ ತನಿಖೆಯನ್ನು ಹೇಗೆ ಈ ನ್ಯಾಯಾಲಯವು ನಿರೀಕ್ಷಿಸಬಹುದು? ಎಂಬ ಪ್ರಶ್ನೆ ಎತ್ತಿದ್ದಾರೆ.
ಕಳೆದ 10 ದಿನಗಳಲ್ಲಿ ಅಮೃತ್ ಪಾಲ್ ಅವರ ಹೇಳಿಕೆಯನ್ನು ಏಕೆ ದಾಖಲಿಸಲಾಗಿಲ್ಲ, ತನಿಖೆಯಲ್ಲಿ ಏಕೆ ಯಾವುದೇ ಪ್ರಗತಿಯಿಲ್ಲ ಎಂದು ಎಸ್‌ಪಿಪಿಯನ್ನು ಪ್ರಶ್ನಿಸಿದ ನ್ಯಾಯಾಲಯ, “ನೀವು ತನಿಖೆಯನ್ನು ಸರಿಯಾದ ರೀತಿಯಲ್ಲಿ ತೆಗೆದುಕೊಳ್ಳುತ್ತಿಲ್ಲ ಎಂದು ಇದು ತೋರಿಸುತ್ತದೆ ಎಂದು ಕಿಡಿ ಕಾರಿದೆ. ನ್ಯಾಯಾಲಯ ಕಣ್ಣು ಮುಚ್ಚಿ ಕುಳಿತಿದೆಯಾ? ಸಿಐಡಿ ಪೊಲೀಸ್ ಮಹಾನಿರ್ದೇಶಕರನ್ನು ಕರೆಸುವಂತೆ ಕೋರ್ಟ್ ಸೂಚಿಸಲು ನೀವು ಬಯಸುತ್ತೀರಾ ಎಂದು ತಪರಾಕಿ ಹಾಕಿದೆ.
ಅಕ್ರಮ ನೇಮಕಾತಿ ಸಮಾಜಕ್ಕೇ ಬಹುದೊಡ್ಡ ಬೆದರಿಕೆಯಾಗಿದೆ. ಪ್ರತಿ ನೇಮಕದಲ್ಲೂ ಹೀಗೇ ಆದರೆ ಕೋರ್ಟ್ ಕಣ್ಮುಚ್ಚಿ ಕೂರಬೇಕೇ ಎಂದು ಪ್ರಶ್ನಿಸಿದ್ದಾರೆ. ಜು.20 ಕ್ಕೆ ತನಿಖಾ ಪ್ರಗತಿ ವಿವರ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ, ಪಿಎಸ್ಐ ಅಭ್ಯರ್ಥಿಗಳು ವಿಸಿ ಮೂಲಕ ಮನವಿ ಸಲ್ಲಿಸಲು ಮುಂದಾಗಿದ್ದಾರೆ, ಅರ್ಜಿ ಸಲ್ಲಿಸದೇ ವಿಸಿ ಮೂಲಕ ವಾದಮಂಡನೆ ಮಾಡುವಂತಿಲ್ಲ, ಅಭ್ಯರ್ಥಿಗಳ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಎಡಿಜಿಪಿ ಮನೆಯನ್ನು ಶೋಧಿಸಲಾಗಿದೆ, ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಕಾಲ್ ಡೇಟಾ ರೆಕಾರ್ಡ್ (ಸಿಡಿಆರ್) ವಿಶ್ಲೇಷಣೆ ನಡೆಯುತ್ತಿದೆ ಎಂದು ಅವರು ಹೇಳಿದರು. ಇನ್ನೂ ಮೂರು ದಿನ ಪೊಲೀಸ್ ಕಸ್ಟಡಿಗೆ ಕೋರಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳಲ್ಲಿ ಯಾವುದೇ ಆತಂಕ ಅಥವಾ ಭಯವಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು.
ಆರೋಪಿಗಳ ಕರೆ ವಿವರವನ್ನು ಪರಿಶೀಲಿಸಲಾಗುತ್ತಿದೆ, ಸಿಐಡಿ ಡಿಜಿಪಿ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ನಿರ್ಲಜ್ಜ ವ್ಯಕ್ತಿಗಳಿಂದ ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ, ಹೀಗಾಗಿ ಜಾಮೀನು ನೀಡದಂತೆ ಎಸ್ಪಿಪಿ ವಿ.ಎಸ್.ಹೆಗ್ಡೆ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


