ರಾಜ್ಯ

ರಾಜ್ಯದ ವಿವಿಧೆಡೆ ಅತಿವೃಷ್ಟಿ: ಇಂದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಅತಿವೃಷ್ಟಿಯಿಂದ ಹಾನಿಗೊಳಗಾದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ರಾಜ್ಯದ ವಿವಿಧೆಡೆ ಅತಿವೃಷ್ಟಿ: ಇಂದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಅತಿವೃಷ್ಟಿಯಿಂದ ಹಾನಿಗೊಳಗಾದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯದ ವಿವಿಧೆಡೆ ಅತಿಯಾಗಿ ಸುರಿಯುತ್ತಿರುವ ಮಳೆ ಮತ್ತು ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 1-30ಕ್ಕೆ ದೇವನಹಳ್ಳಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ,  ಹಾಸನ, ಬೀದರ್, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟೆ, ವಿಜಯಪುರ, ರಾಯಚೂರು, ವಿಜಯನಗರ, ಚಾಮರಾಜನಗರ, ಮಂಡ್ಯ ಮತ್ತು ಬಳ್ಳಾರಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ.

ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಲಿದ್ದು, ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಮತ್ತು ಹಾನಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸಂಬಂಧಿಸಿದ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳು ಕೂಡಾ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.