ಈದ್ಗಾ ಮೈದಾನಕ್ಕೆ ಚಾಮರಾಜೇಂದ್ರ ಒಡೆಯರ್ ಹೆಸರಿಡಿ: ಸಂಸದ ಪಿ.ಸಿ.ಮೋಹನ್
ಈದ್ಗಾ ಮೈದಾನದ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಭೇಟಿ ಮಾಡಿದ ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್, ಮೈದಾನಕ್ಕೆ ಮೈಸೂರು ಮಹಾರಾಜ ಚಾಮರಾಜೇಂದ್ರ ಒಡೆಯರ್ ಹೆಸರಿಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು: ಈದ್ಗಾ ಮೈದಾನದ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಬಂದ್‌ನ ಎರಡು ದಿನಗಳ ನಂತರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ಭೇಟಿ ಮಾಡಿದ ಬೆಂಗಳೂರು ಕೇಂದ್ರ ಸಂಸದ ಪಿಸಿ ಮೋಹನ್, ಮೈದಾನಕ್ಕೆ ಮೈಸೂರು ಮಹಾರಾಜ ಚಾಮರಾಜೇಂದ್ರ ಒಡೆಯರ್ ಹೆಸರಿಡುವಂತೆ ಮನವಿ ಮಾಡಿದ್ದಾರೆ.
ಮೈದಾನದಲ್ಲಿ ಸ್ವಾತಂತ್ರ ದಿನಾಚರಣೆ, ಅಂಬೇಡ್ಕರ್ ಜಯಂತಿ, ರಾಜ್ಯೋತ್ಸವ ಮತ್ತಿತರ ಸರ್ಕಾರಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು. ಮೈದಾನದಲ್ಲಿ ಹಿಂದೂ ಹಬ್ಬಗಳನ್ನು ಆಚರಿಸಲು ಅನುಮತಿ ಅಗತ್ಯವಿಲ್ಲ ಎಂದು ಅವರು ಪ್ರತಿಪಾದಿಸಿದರು.
ಜುಲೈ 12 ರಂದು ಚಾಮರಾಜಪೇಟೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬಂದ್ ಯಶಸ್ವಿಯಾಗಿದೆ. ಈದ್ಗಾ ಮೈದಾನ ಆಟದ ಮೈದಾನವಾಗಿ ಉಳಿಯಲಿದ್ದು, ಇದು ಬಿಬಿಎಂಪಿ ಆಸ್ತಿಯಾಗಿದೆ ಎಂದರು.
ಬಿಬಿಎಂಪಿ ಅನುಮತಿ ನಿರಾಕರಿಸಿದರೆ ಅದು ದೇಶಕ್ಕೆ ಮಾಡಿದ ದೊಡ್ಡ ಅವಮಾನವಾಗುತ್ತದೆ ಎಂದರು. ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದನ್ನು ಯಾರೂ ವಿರೋಧಿಸುವುದಿಲ್ಲ ಆದರೆ ಹಿಂದೂ ಹಬ್ಬಗಳನ್ನು ಸಹ ನಡೆಸಬೇಕು ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


