ರಾಜ್ಯ

ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ, ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ: ಮುಖ್ಯಮಂತ್ರಿ ಬೊಮ್ಮಾಯಿ ಸಮರ್ಥನೆ

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ-ವಿಡಿಯೊ ತೆಗೆಯಬಾರದು ಎಂದು ಸರ್ಕಾರ ಆದೇಶ ಹೊರಡಿಸಿದ ದಿನವೇ ವಾಪಸ್ ಪಡೆದು ನಗೆಪಾಟಲಿಗೀಡಾಗಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ, ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ: ಮುಖ್ಯಮಂತ್ರಿ ಬೊಮ್ಮಾಯಿ ಸಮರ್ಥನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು
Published On :

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ-ವಿಡಿಯೊ ತೆಗೆಯಬಾರದು ಎಂದು ಸರ್ಕಾರ ಆದೇಶ ಹೊರಡಿಸಿದ ದಿನವೇ ವಾಪಸ್ ಪಡೆದು ನಗೆಪಾಟಲಿಗೀಡಾಗಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆದೇಶ ಹೊರಡಿಸಿದ್ದು ನನ್ನ ಗಮನಕ್ಕೆ ಬಂದಿರಲಿಲ್ಲ. ಸರ್ಕಾರಿ ನೌಕರರು ಬಹಳ ದಿನಗಳಿಂದ ಕಚೇರಿಗಳಲ್ಲಿ ಫೋಟೋ-ವಿಡಿಯೊ ತೆಗೆಯುವುದಕ್ಕೆ ನಿರ್ಬಂಧ ಹೇರಬೇಕೆಂದು ಒತ್ತಾಯಿಸುತ್ತಿದ್ದರು. ನೌಕರರು ಹೇಳುವುದರಲ್ಲಿಯೂ ಅರ್ಥವಿದೆ. ಕೆಲವು ಹೆಣ್ಣುಮಕ್ಕಳಿಗೆ ಫೋಟೋ, ವಿಡಿಯೊ ತೆಗೆದು ತೊಂದರೆಯಾಗಿತ್ತು ಎಂದರು.

ಸರ್ಕಾರ ಪಾರದರ್ಶಕವಾಗಿದೆ: ಯಾರು ಏನೇ ಹೇಳಿದರೂ, ಟೀಕೆ ಮಾಡಿದರೂ ಸರ್ಕಾರ, ಇಲಾಖೆಗಳ ಕೆಲಸ ಪಾರದರ್ಶಕವಾಗಿ ನಡೆಯುತ್ತಿದೆ. ನಾವು ಯಾವುದನ್ನೂ ಮುಚ್ಚಿಡುವ ಪ್ರಶ್ನೆಯಿಲ್ಲ, ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ಹೀಗಾಗಿ ಯಾವುದೇ ರೀತಿಯ ನಿರ್ಬಂಧ ಹಾಕಬಾರದು, ಮೊದಲು ಯಾವ ರೀತಿಯಿದ್ದು ಅದೇ ರೀತಿ ಮುಂದುವರಿದುಕೊಂಡು ಹೋಗಬೇಕು ಎಂದು ತಾತ್ವಿಕ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ ಎಂದು ಸಮರ್ಥಿಸಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.