ರಾಜ್ಯ

ಹಾಲಿನ ಉತ್ಪನ್ನಗಳ ಮೇಲೆ ಶೇ.5 ರಷ್ಟು ಜಿಎಸ್‌ಟಿ, ಗ್ರಾಹಕರಿಗೆ ವರ್ಗಾಯಿಸದಂತೆ ವ್ಯಾಪಾರಿಗಳಿಗೆ ಸೂಚನೆ- ಸಿಎಂ ಬೊಮ್ಮಾಯಿ

ಡೈರಿ ಉತ್ಪನ್ನಗಳು, ಪ್ಯಾಕ್ ಮಾಡಿದ ಮತ್ತು ಬ್ರಾಂಡೆಡ್ ಆಹಾರ ಉತ್ಪನ್ನಗಳ ಮೇಲಿನ ಶೇ. 5 ರಷ್ಟು ಜಿಎಸ್‌ಟಿ ತೆರಿಗೆಯನ್ನು ಗ್ರಾಹಕರಿಗೆ ವರ್ಗಾಯಿಸದಂತೆ ವ್ಯಾಪಾರಿಗಳನ್ನು ಕೇಳಿಕೊಳ್ಳುವುದಾಗಿ ಜಿಎಸ್‌ಟಿ ದರ ತರ್ಕಬದ್ಧಗೊಳಿಸುವಿಕೆ ಕುರಿತು ಸಚಿವರ ಗುಂಪಿನ (ಜಿಒಎಂ) ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಾಲಿನ ಉತ್ಪನ್ನಗಳ ಮೇಲೆ ಶೇ.5 ರಷ್ಟು ಜಿಎಸ್‌ಟಿ, ಗ್ರಾಹಕರಿಗೆ ವರ್ಗಾಯಿಸದಂತೆ ವ್ಯಾಪಾರಿಗಳಿಗೆ ಸೂಚನೆ- ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಡೈರಿ ಉತ್ಪನ್ನಗಳು, ಪ್ಯಾಕ್ ಮಾಡಿದ ಮತ್ತು   ಬ್ರಾಂಡೆಡ್ ಆಹಾರ ಉತ್ಪನ್ನಗಳ ಮೇಲಿನ ಶೇ. 5 ರಷ್ಟು ಜಿಎಸ್‌ಟಿ ತೆರಿಗೆಯನ್ನು ಗ್ರಾಹಕರಿಗೆ ವರ್ಗಾಯಿಸದಂತೆ ವ್ಯಾಪಾರಿಗಳನ್ನು ಕೇಳಿಕೊಳ್ಳುವುದಾಗಿ  ಜಿಎಸ್‌ಟಿ ದರ ತರ್ಕಬದ್ಧಗೊಳಿಸುವಿಕೆ ಕುರಿತು ಸಚಿವರ ಗುಂಪಿನ (ಜಿಒಎಂ) ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಸರ್ಕಾರಿ ಸ್ವಾಮ್ಯದ ಕೆಜಿಎಂಫ್  ಮಜ್ಜಿಗೆ, ಲಸ್ಸಿ ಮತ್ತು ಮೊಸರು ಸೇರಿದಂತೆ ಅದರ ಉತ್ಪನ್ನಗಳ ದರಗಳನ್ನು ಪರಿಷ್ಕರಿಸಿದೆ. ತನ್ನ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸುವ ಕೆಎಂಎಫ್ ನಿರ್ಧಾರ ಗ್ರಾಹಕರಿಗೆ ಆಘಾತವನ್ನುಂಟುಮಾಡಿದೆ, ಅವರು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಇದರಿಂದಾಗಿ ಒತ್ತಡಕ್ಕೆ ಸಿಲುಕಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರದಿಂದ ಮರುಪಾವತಿ ಪಡೆಯುವ ನಿಬಂಧನೆ ಇರುವಾಗ, ತೆರಿಗೆ ಹೊರೆಯನ್ನು ಗ್ರಾಹಕರ ಮೇಲೆ ಹೊರಿಸದಂತೆ ಡೀಲರ್ ಗಳಿಗೆ ಸಲಹೆ ನೀಡಿದ್ದಾರೆ. 

ಪ್ಯಾಕ್ ಮಾಡಲಾದ ಮತ್ತು ಬ್ರಾಂಡೆಡ್ ಆಹಾರ ಪದಾರ್ಥಗಳ ಮೇಲೆ ಮಾತ್ರ ಶೇ. 5 ರಷ್ಟು ಜಿಎಸ್ ಟಿ ಹಾಕಲಾಗುತ್ತಿದೆ. ಅಂದಮಾತ್ರಕ್ಕೆ ಇದನ್ನು ಗ್ರಾಹಕರಿಗೆ ವರ್ಗಾಯಿಲಾಗುತ್ತಿದೆ ಎಂದರ್ಥವಲ್ಲ,  ಏಕೆಂದರೆ ಮುಂದಿನ ದಿನಗಳಲ್ಲಿ ವ್ಯಾಪಾರಿಗಳು ಪಾವತಿಸಿದ ಸುಂಕವನ್ನು ಮರುಪಾವತಿ ಮಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ ಜಿಎಸ್‌ಟಿ ಕೌನ್ಸಿಲ್‌ ಗೆ ಸೂಚನೆಗಳನ್ನು ನೀಡುತ್ತೇನೆ  ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.