ಡಾ. ಸಿಎನ್ ಮಂಜುನಾಥ್ ಸೇವಾವಧಿ ಒಂದು ವರ್ಷ ವಿಸ್ತರಣೆ: ರಾಜ್ಯ ಸರ್ಕಾರ ಆದೇಶ
ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿರುವ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ (Jayadeva hospital) ನಿರ್ದೇಶಕರಾಗಿರುವ ಡಾ.ಸಿ.ಎನ್. ಮಂಜುನಾಥ್ (Dr C N Manjunath) ಅವರ ಸೇವಾವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅವರು 2023ರರ ಜುಲೈ 19ರವರೆಗೆ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿಯವರು ಡಾ. ಸಿ ಎನ್ ಮಂಜುನಾಥ್ ಅವರ ಸಾಧನೆ ಮತ್ತು ಆಡಳಿತ ವೈಖರಿ ಪರಿಗಣಿಸಿ ಅವರ ಸೇವಾವಧಿಯನ್ನು ಮುಂದಿನ ಒಂದು ವರ್ಷಕ್ಕೆ ವಿಸ್ತರಿಸಿದ್ದಾರೆ.
ತಮ್ಮ ಸೇವಾವಧಿ ವಿಸ್ತರಣೆ ಮಾಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರಿಗೆ ಡಾ. ಸಿ ಎನ್ ಮಂಜುನಾಥ್ ಅಭಿನಂದನೆ ತಿಳಿಸಿದ್ದಾರೆ.
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿರುವ ಡಾ.ಸಿ.ಎನ್. ಮಂಜುನಾಥ್ ಅವರು ನಿವೃತ್ತಿಯಾಗುತ್ತಿರುವುದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಿಬ್ಬಂದಿಗೆ ಅಪಾರವಾದ ನೋವನ್ನುಂಟು ಮಾಡಿದೆ.
ಅದಕ್ಕೆ ಸಿಬ್ಬಂದಿ ವರ್ಗವು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಮಂಜುನಾಥ್ ಅವರನ್ನೇ ನಿರ್ದೇಶಕರನ್ನಾಗಿ ಮುಂದುವರಿಸುವಂತೆ ಮನವಿ ಮಾಡಿದ್ದರು. ನ್ಯಾಷನಲ್ ಮೆಡಿಕಲ್ ಕೌನ್ಸಿಲ್ ಪ್ರಕಾರ 70 ವರ್ಷದವರೆಗೆ ಸೇವೆ ಸಲ್ಲಿಸಲು ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


