ಉಪರಾಷ್ಟ್ರಪತಿ ಚುನಾವಣೆಗೆ ಆಳ್ವ ನಾಮಪತ್ರ; ಟಿಎಂಸಿ, ಎಎಪಿ ಗೈರು
ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿರುವ ಮಾರ್ಗರೇಟ್ ಆಳ್ವ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿರುವ ಮಾರ್ಗರೇಟ್ ಆಳ್ವ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಶಿವಸೇನೆ ನಾಯಕ ಸಂಜಯ್ ರಾವುತ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಉಪಸ್ಥಿತರಿದ್ದರು. ಆದರೆ ಟಿಎಂಸಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರು ಗೈರಾಗಿದ್ದರು.
ಆ.6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಆ. 10 ರಂದು ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅವಧಿ ಪೂರ್ಣಗೊಳ್ಳಲಿದೆ.
ಎನ್ ಡಿಎ ಅಭ್ಯರ್ಥಿ ಜಗದೀಪ್ ಧನ್ಕರ್ ಅವರ ವಿರುದ್ಧ ಮಾರ್ಗರೇಟ್ ಆಳ್ವ ಸ್ಪರ್ಧಿಸಿದ್ದಾರೆ.ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸುವ ವಿಪಕ್ಷಗಳ ಸಭೆಗೂ ಟಿಎಂಸಿ ಹಾಗೂ ಆಮ್ ಆದ್ಮಿ ಪಕ್ಷಗಳು ಗೈರಾಗಿದ್ದವು. ಆದರೆ ಪವಾರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಕೇಜ್ರಿವಾಲ್ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ. ಇಂದು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


