ರಾಜ್ಯ

'ಜೈಲಿಗೆ ಹೋಗಿ ಬಂದು ಮೂರು ವರ್ಷ ಆಯ್ತು, ಈಗ ಮತ್ತೆ ಲವ್ ಲೆಟರ್': ಡಿಕೆ ಶಿವಕುಮಾರ್

ಇಡಿ ಹಾಗೂ ಐಟಿ ಅಧಿಕಾರಿಗಳು ನನಗೆ ಹಾಗೂ ನನ್ನೊಂದಿಗೆ ವ್ಯವಹರಿಸಿದವರಿಗೆ ಅನಗತ್ಯವಾಗಿ ಕಿರುಕುಳ ಕೊಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

'ಜೈಲಿಗೆ ಹೋಗಿ ಬಂದು ಮೂರು ವರ್ಷ ಆಯ್ತು, ಈಗ ಮತ್ತೆ ಲವ್ ಲೆಟರ್': ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Published On :

ಬೆಂಗಳೂರು: ಇಡಿ ಹಾಗೂ ಐಟಿ ಅಧಿಕಾರಿಗಳು ನನಗೆ ಹಾಗೂ ನನ್ನೊಂದಿಗೆ ವ್ಯವಹರಿಸಿದವರಿಗೆ ಅನಗತ್ಯವಾಗಿ ಕಿರುಕುಳ ಕೊಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಇಡಿ ವಿಚಾರಣೆಗೆ ವಿರೋಧ ವ್ಯಕ್ತಪಡಿಸಿ ಫ್ರೀಡಂ ಪಾರ್ಕ್ ನಲ್ಲಿಂದು ಪ್ರತಿಭಟನೆ ವೇಳೆ ಮಾತನಾಡಿದ ಅವರು, ನಾನು ಜೈಲಿಗೆ ಹೋಗಿ ಬಂದು ಮೂರು ವರ್ಷ ಆಯಿತು. ಈಗ ಮತ್ತೆ ಲವ್ ಲೆಟರ್ ಬರ್ತಾ ಇದ್ದಾವೆ. ಒಂದು ವರ್ಷ ಬಿಟ್ಟು ಬಿಡ್ರಪ್ಪ ಅಂತಾ ಇಡಿ, ಐಟಿ ಅಧಿಕಾರಿಗಳಿಗೆ ಪತ್ರ ಬರೆದಿದ್ದೇನೆ. ಎರಡ್ಮೂರು ವರ್ಷ ಬಿಟ್ಟು ಚಾರ್ಜ್ ಶೀಟ್ ಹಾಕಿದ್ದಾರೆ ಎಂದರು.

ನನ್ನ ಜೊತೆಗೆ ವ್ಯವಹಾರ ಮಾಡಿದವರಿಗೆ ನೋಟಿಸ್ ನೀಡುತ್ತಿದ್ದಾರೆ. ರಾಮನಗರ ಅಭ್ಯರ್ಥಿ ಸೇರಿದಂತೆ ನನ್ನೊಂದಿಗೆ ವ್ಯವಹಾರ ಮಾಡಿದವರಿಗೆ ನೋಟಿಸ್ ಕೊಟ್ಟು ಕರೆಯುತ್ತಿದ್ದಾರೆ. ನನ್ನಂತವರಿಗೆ ಇದೇ ರೀತಿಯ ಕಿರುಕುಳ ಕೊಡುತ್ತಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.