ರಾಜ್ಯ

ಭ್ರಷ್ಟಾಚಾರ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಕೊಟ್ಟ ಸುಪ್ರೀಂ ಕೋರ್ಟ್!

ಶಿಕಾರಿಪುರ ಕ್ಷೇತ್ರವನ್ನ ಪುತ್ರ ವಿಜಯೇಂದ್ರನಿಗೆ ಬಿಟ್ಟುಕೊಡುವ ನಿರ್ಧಾರ ಪ್ರಕಟಿಸಿದ ದಿನವೇ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಭ್ರಷ್ಟಾಚಾರ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಕೊಟ್ಟ ಸುಪ್ರೀಂ ಕೋರ್ಟ್!
ಬಿಎಸ್ ಯಡಿಯೂರಪ್ಪ
Published On :

ಬೆಂಗಳೂರು: ಶಿಕಾರಿಪುರ ಕ್ಷೇತ್ರವನ್ನ ಪುತ್ರ ವಿಜಯೇಂದ್ರನಿಗೆ ಬಿಟ್ಟುಕೊಡುವ ನಿರ್ಧಾರ ಪ್ರಕಟಿಸಿದ ದಿನವೇ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ತಮ್ಮ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ತಡೆಹಿಡಿಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ. ಭೂ ಹಂಚಿಕೆ ಹಗರಣದಲ್ಲಿ ಆರೋಪಿಯಾಗಿರುವ  ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು.

ಮಾಜಿ ಸಿಎಂ ಬಿ.ಎಸ್ . ಯಡಿಯೂರಪ್ಪ 2006-7ರಲ್ಲಿ ಉಪಮುಖ್ಯಮಂತ್ರಿಯಾಗಿದ್ದಾಗ ಅಕ್ರಮವಾಗಿ ಎಕರೆಗಟ್ಟಲೆ ಭೂಮಿಯನ್ನು ಡಿನೋಟಿಫೈ ಮಾಡಿ ಉದ್ಯಮಿಗಳಿಗೆ ಜಮೀನು ಮಂಜೂರು ಮಾಡಿದ ಆರೋಪ ಹೊತ್ತಿದ್ದಾರೆ. ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

2020ರಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ದಾಖಲಿಸಿದ ಎಫ್‌ಐಆರ್ ಅನ್ನು ರದ್ದುಗೊಳಿಸಬೇಕೆಂಬ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಹೈಕೋರ್ಟ್ ನ್ಯಾಯಾಧೀಶ ಜಾನ್ ಮೈಕೆಲ್ ಕುನ್ಹಾ ಅವರು ತನಿಖೆ ವಿಳಂಬಕ್ಕೆ ಪೊಲೀಸರಿಗೆ ಛೀಮಾರಿ ಹಾಕಿದ್ದರು. “ವಿಳಂಬವು ಉದ್ದೇಶಪೂರ್ವಕ ಮತ್ತು ಉದ್ದೇಶಪೂರ್ವಕವಾಗಿದೆ ಎಂದು ಸಂದರ್ಭಗಳು ಸ್ಪಷ್ಟವಾಗಿ ಸೂಚಿಸುತ್ತವೆ” ಎಂದು ನ್ಯಾಯಾಧೀಶರು ಹೇಳಿದ್ದರು.

2013ರಲ್ಲಿ ವಾಸುದೇವ ರೆಡ್ಡಿ ಎಂಬುವರು ಖಾಸಗಿ ದೂರಿನ ಮೇರೆಗೆ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಮಾಜಿ ಮುಖ್ಯಮಂತ್ರಿ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿಯಲ್ಲಿ ಐಟಿ ಪಾರ್ಕ್ ಅಭಿವೃದ್ಧಿ ಪಡಿಸಲು ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.