ಜಲ ಜೀವನ್ ಮಿಷನ್ ಯೋಜನೆ ಜಾರಿ: ಗದಗ ಜಿಲ್ಲೆಗೆ ಮೊದಲ ಸ್ಥಾನ
ಜಲ ಜೀವನ್ ಮಿಷನ್ (JJM) ಯೋಜನೆ ಅನುಷ್ಠಾನದಲ್ಲಿ ಗದಗ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಧಾರವಾಡ, ಮಂಡ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆ ನಂತರದ ಸ್ಥಾನಗಳಲ್ಲಿವೆ. ಯೋಜನೆ ಅನುಷ್ಠಾನಕ್ಕೆ ಗ್ರಾಮಸ್ಥರು ನೀಡಿದ ಅಪಾರ ಬೆಂಬಲ ಯಶಸ್ಸಿಗೆ ಕಾರಣವಾಗಿದೆ.

ಗದಗ: ಜಲ ಜೀವನ್ ಮಿಷನ್ (JJM) ಯೋಜನೆ ಅನುಷ್ಠಾನದಲ್ಲಿ ಗದಗ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಧಾರವಾಡ, ಮಂಡ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲೆ ನಂತರದ ಸ್ಥಾನಗಳಲ್ಲಿವೆ. ಯೋಜನೆ ಅನುಷ್ಠಾನಕ್ಕೆ ಗ್ರಾಮಸ್ಥರು ನೀಡಿದ ಅಪಾರ ಬೆಂಬಲ ಯಶಸ್ಸಿಗೆ ಕಾರಣವಾಗಿದೆ.
ಗದಗ ಜಿಲ್ಲೆ ಜೆಜೆಎಂ ಯೋಜನೆಯ ಅನುಷ್ಠಾನದಲ್ಲಿ ಶೇ.97.84 ಸಾಧಿಸಿದ್ದರೆ, ಧಾರವಾಡ ಶೇ.95.37, ಮಂಡ್ಯ ಶೇ.77.55, ದಕ್ಷಿಣ ಕನ್ನಡ ಶೇ.75.86, ಕೊಪ್ಪಳ ಶೇ.75.66 ಸಾಧಿಸಿದೆ.
ಅಬ್ಬಿಗೇರಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮೀರ ನಾಯಕ್, ಕೆಲವು ಗ್ರಾಮಸ್ಥರು ಯೋಜನೆಗೆ ಆರಂಭದಲ್ಲಿ ವಿರೋಧ ವ್ಯಕ್ತಪಡಿಸಿದರೂ ನಂತರ ಮನವೊಲಿಸಲಾಯಿತು. ಈಗ, ಬಹುತೇಕ ಎಲ್ಲಾ ಮನೆಗಳು ನೀರಿನ ಸಂಪರ್ಕವನ್ನು ಹೊಂದಿದ್ದು, ಈ ವಾರಾಂತ್ಯದೊಳಗೆ ನಾವು ಕೆಲಸವನ್ನು ಪೂರ್ಣಗೊಳಿಸುತ್ತೇವೆ ಎಂದಿದ್ದಾರೆ.
ಜೆಜೆಎಂ ಯೋಜನೆಯ ಕಾರ್ಯಪಾಲಕ ಅಭಿಯಂತರ ಆನಂದ್, ಗ್ರಾಮಸ್ಥರು, ಗ್ರಾ.ಪಂ.ಸಿಬ್ಬಂದಿ, ಪಿಡಿಒಗಳು ಹಾಗೂ ಐಎಸ್‌ಎ ತಂಡಕ್ಕೆ ಧನ್ಯವಾದ ಹೇಳಬೇಕು. ನಾವು ಶೇಕಡಾ 100ರಷ್ಟು ಕೆಲಸಗಳನ್ನು ಪೂರ್ಣಗೊಳಿಸಿದ್ದೇವೆ. ರೋಣ ಮತ್ತು ಶಿರಹಟ್ಟಿ ತಾಲೂಕು ದೊಡ್ಡದಾಗಿರುವುದರಿಂದ ಸಮಯ ತೆಗೆದುಕೊಳ್ಳುತ್ತಿದೆ ಎಂದರು.
ಬೆಳಗಾವಿ, ಗದಗ, ಹುಬ್ಬಳ್ಳಿ ಅಥವಾ ಧಾರವಾಡ ಪ್ರದೇಶವನ್ನು ಜಲಜೀವನ ಮಿಷನ್ ಹಂತ-1 ರಲ್ಲಿ ಆಯ್ಕೆ ಮಾಡಲಾಗಿದೆ. ನಾನು ಈ ಹಿಂದೆ ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದಾಗ ಈಗಾಗಲೇ 800 ಗ್ರಾಮಗಳನ್ನು ಸಮೀಕ್ಷೆ ಮಾಡಲಾಗಿತ್ತು. ಈ ಎಲ್ಲಾ ಪ್ರದೇಶಗಳಲ್ಲಿ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಬೆಂಗಳೂರು ನಗರ ಡಿಸಿ ಕೆ ಶ್ರೀನಿವಾಸ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


